/newsfirstlive-kannada/media/media_files/2025/10/02/kunigal-mla-ranganath-and-shivrame-gowda-2025-10-02-20-18-32.jpg)
ಕುಣಿಗಲ್ ಶಾಸಕ ರಂಗನಾಥ್ , ಮಾಜಿ ಸಂಸದ ಶಿವರಾಮೇಗೌಡ
ಕಾಂಗ್ರೆಸ್ ಪಕ್ಷದಿಂದ ಕುಣಿಗಲ್ ಶಾಸಕ ಡಾ.ಎಚ್.ಡಿ. ರಂಗನಾಥ್ ಹಾಗೂ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡಗೆ ನೋಟಿಸ್ ನೀಡಲಾಗಿದೆ. ಸಿಎಂ ಬದಲಾವಣೆ ಸಂಬಂಧ ಬಹಿರಂಗ ಹೇಳಿಕೆ ನೀಡಿದಕ್ಕೆ ಕಾರಣ ಕೇಳಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ನೋಟಿಸ್ ನೀಡಿದೆ. ಒಂದು ವಾರದೊಳಗೆ ತಮ್ಮ ಹೇಳಿಕೆಗೆ ಸಮಜಾಯಿಷಿ ನೀಡುವಂತೆ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ನೋಟಿಸ್ ನೀಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆಂದು ಮಾಧ್ಯಮಗಳ ಮುಂದೆ ಕುಣಿಗಲ್ ಶಾಸಕ ಡಾ. ಎಚ್.ಡಿ. ರಂಗನಾಥ್ ಹಾಗೂ ಮಂಡ್ಯದ ಮಾಜಿ ಸಂಸದ ಶಿವರಾಮೇಗೌಡ ಹೇಳಿಕೆ ನೀಡಿದ್ದರು. ಇದು ಪಕ್ಷದ ಶಿಸ್ತಿನ ಉಲಂಘನೆ ಎಂದು ಇಬ್ಬರೂ ನಾಯಕರಿಗೆ ಪಕ್ಷದಿಂದ ನೋಟೀಸ್ ನೀಡಲಾಗಿದೆ.
ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಹೇಳಿಕೆ ನೀಡಬಾರದೆಂದು ಈ ಹಿಂದೆಯೇ ಎಐಸಿಸಿ ಎಲ್ಲರಿಗೂ ಸೂಚಿಸಿದೆ. ನಿಮ್ಮ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೇ, ಪಕ್ಷದ ಶಿಸ್ತು ಉಲಂಘನೆಗೆ ಕಾರಣವಾಗಿದೆ ಎಂದು ನೋಟೀಸ್ ನಲ್ಲಿ ಹೇಳಲಾಗಿದೆ. ಮುಂದಿನ ಒಂದು ವಾರದೊಳಗಾಗಿ ತಮ್ಮ ಹೇಳಿಕೆಗೆ ಸಮಜಾಯಿಷಿ ನೀಡಬೇಕೆಂದು ನೋಟೀಸ್ ನಲ್ಲಿ ಇಬ್ಬರಿಗೂ ತಿಳಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ