/newsfirstlive-kannada/media/media_files/2025/11/19/narendra-swamy-1-2025-11-19-21-47-30.jpg)
ನಾನೇ ಸಿಎಂ ಆಗಿ ಮುಂದುವರಿಯುವೆ ಎಂದ ಸಿದ್ದರಾಮಯ್ಯ
ರಾಜ್ಯದಲ್ಲಿ ಈಗ ಸಿಎಂ ಹುದ್ದೆ ಬದಲಾವಣೆಯ ಬಗ್ಗೆ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಇತ್ತ ಬೆಂಗಳೂರು, ಅತ್ತ ದೆಹಲಿಯಲ್ಲಿ ಎರಡು ಬಣಗಳು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿವೆ. ಸಿದ್ದರಾಮಯ್ಯ ಅವರು ಸಿಎಂ ಆಗಿ ಎರಡೂವರೆ ವರ್ಷ ಪೂರ್ಣಗೊಳಿಸಿರುವುದರಿಂದ ಸಿಎಂ ಸ್ಥಾನವನ್ನು ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ನೀಡಬೇಕೆಂದು ಡಿಕೆ ಬಣದ ಕಾಂಗ್ರೆಸ್ ಶಾಸಕರು ಲಾಬಿ ಆರಂಭಿಸಿದ್ದಾರೆ.
ದೆಹಲಿಗೆ ಹೋಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.
ಆದರೇ, ಇದೆಲ್ಲಾದರ ಮಧ್ಯೆ ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಬಜೆಟ್ ಮಂಡಿಸುತ್ತೇನೆ. ನಾಯಕತ್ವದ ಬಗ್ಗೆ ಹೈಕಮ್ಯಾಂಡ್ ತೀರ್ಮಾನವೇ ಅಂತಿಮ . ಹೈಕಮ್ಯಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕು . ನಾಳೆ ನಾನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೈಕಮ್ಯಾಂಡ್ ತೀರ್ಮಾನಕ್ಕೆ ನಾನು, ಡಿಸಿಎಂ, ಸಚಿವರೆಲ್ಲಾ ಬದ್ದರಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದರ ಮಧ್ಯೆ ಇಂದು ಸಂಜೆ ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸೋದರ ಡಿ.ಕೆ.ಸುರೇಶ್ ಕೂಡ ನಿರ್ಧರಿಸಿದ್ದಾರೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us