/newsfirstlive-kannada/media/media_files/2025/09/17/cm-siddaramaiah-1-2025-09-17-18-10-03.jpg)
ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ನಾನೇ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಇಂದು ಮತ್ತೊಮ್ಮೆ ಹೇಳಿದ್ದಾರೆ. ಮುಂದಿನ ವರ್ಷವೂ ನಾನೇ ಯಾಕೆ ಜಂಬೂ ಸವಾರಿಯಲ್ಲಿ ವಿರಾಜಮಾನ ಆಗಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಬಾರದು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇಷ್ಟು ವರ್ಷ ಮಾಡಿಕೊಂಡು ಬಂದಿದ್ದೇನೆ. ಐ ಹೋಪ್ ಮುಂದಿನ ವರ್ಷವೂ ನಾನೇ ಮಾಡುತ್ತೇನೆ.
ಎರಡನೇ ಭಾರಿ ಸಿಎಂ ಆಗಲ್ಲ ಅಂದಿದ್ದರು. ಸಿಎಂ ಕೂಡ ಆಗಿದ್ದೇನೆ. ಬಹಳ ಜನ ಬಹಳಷ್ಟು ಹೇಳುತ್ತಾರೆ, ಹೇಳಲಿ. ನವೆಂಬರನಲ್ಲಿ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುವ ಕಾರಣ ಆ ರೀತಿ ಮಾತನಾಡುತ್ತಾರೆ. ಹೈ ಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ಹೈ ಕಮಾಂಡ್ ಹೇಳಿದಂತೆ ಕೇಳಬೇಕು.
ಬಿಜೆಪಿಗೆ ವಸ್ತು ಸ್ಥಿತಿ ಗೊತ್ತಿಲ್ಲ. ಅವರು ಹೇಳಿದಂತೆ ಏನು ನಡೆಯುವುದಿಲ್ಲ. ಬಿಜೆಪಿ ನಾಯಕರು ಭವಿಷ್ಯಕಾರರಲ್ಲ . ಬಿಜೆಪಿ ಹೇಳಿದ್ದೆಲ್ಲಾ ಸುಳ್ಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಮೈಸೂರಿನಲ್ಲಿ ಇಂದು ಹೇಳಿದ್ದಾರೆ.
ನಾಳೆ ಮೈಸೂರಿನ ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಚಾಲನೆ ನೀಡುವ ಸಿಎಂ ಸಿದ್ದರಾಮಯ್ಯ, ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವರು. 8 ನೇ ವರ್ಷ ಜಂಬೂ ಸವಾರಿಗೆ ಸಿಎಂ ಆಗಿ ಸಿದ್ದರಾಮಯ್ಯ ಚಾಲನೆ ನೀಡುತ್ತಿರುವುದು ವಿಶೇಷ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.