/newsfirstlive-kannada/media/media_files/2025/12/11/siddaramaiah-copter-1-2025-12-11-16-28-28.jpg)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಮತ್ತು ವಿಮಾನ ಬಳಕೆಗೆ ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡಿರೋದು ರಿವೀಲ್ ಆಗಿದೆ. 2023 ರಿಂದ ಇಲ್ಲಿಯವರೆಗೆ ಹೆಲಿಕಾಪ್ಟರ್ ಹಾಗೂ ವಿಶೇಷ ವಿಮಾನದ ಬಳಕೆಗಾಗಿ 47,38,24,347 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪರಿಷತ್ ಸದಸ್ಯ​ ಎನ್.ರವಿಕುಮಾರ್ ಕೇಳಿದ ಪ್ರಶ್ನೆಗೆ ಸರ್ಕಾರ ಉತ್ತರ ನೀಡಿದೆ. 2023 ರಿಂದ ಅಂದ್ರೆ ಸಿಎಂ ಆದಾಗಿನಿಂದ 2025ರ ನವೆಂಬರ್ ವರೆಗಿನ ಸಿಎಂ ಸಿದ್ದರಾಮಯ್ಯ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣದ ವೆಚ್ಚವನ್ನು ಸರ್ಕಾರ ನೀಡಿದೆ. ವಿಮಾನಯಾನಕ್ಕೆ ಒಟ್ಟು 47 ಕೋಟಿ ರೂಪಾಯಿ ಹಣ ಬಳಕೆ ಮಾಡಲಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಹೋಗಲು ಹೆಲಿಕಾಪ್ಟರ್, ವಿಶೇಷ ವಿಮಾನ ಬಳಕೆ ಮಾಡಲಾಗಿದೆ. ದೆಹಲಿ, ಹೈದ್ರಾಬಾದ್, ಚೆನ್ನೈ ಸೇರಿದಂತೆ ವಿವಿಧೆಡೆ ಸಿಎಂ ಓಡಾಟ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಬೊಕ್ಕಸದಿಂದ 47 ಕೋಟಿ ರೂಪಾಯಿ ಖರ್ಚು ಆಗಿದೆ. ಬರೀ 5 ಕೋಟಿಗೂ ಹೆಚ್ಚು ಹಣವನ್ನು ಮೈಸೂರು ಪ್ರವಾಸಕ್ಕೆ ಸಿಎಂ ಬಳಕೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us