/newsfirstlive-kannada/media/media_files/2025/11/17/cm-siddaramaiah-meets-kharge-2025-11-17-19-40-37.jpg)
ದೆಹಲಿಯಲ್ಲಿ ಖರ್ಗೆ ಭೇಟಿಯಾದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಜ್ಯದ ಕ್ಯಾಬಿನೆಟ್ ಪುನರ್ ರಚನೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿ ಸೂಚನೆಯ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಮಾತುಕತೆ ನಡೆಸಿದ್ದಾರೆ.
ನಾಲ್ಕು ತಿಂಗಳ ಹಿಂದೆಯೇ ಕಾಂಗ್ರೆಸ್ ಹೈಕಮ್ಯಾಂಡ್ ಸಂಪುಟ ಪುನರ ರಚನೆಗೆ ಸೂಚಿಸಿತ್ತು. ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣವಾಗಲಿ ಎಂದು ನಾನೇ ಹೇಳಿದ್ದೆ. ನವಂಬರ್ 20 ಕ್ಕೆ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣವಾಗುತ್ತಿದೆ. ಹಾಗಾಗಿ ಈಗ ಭೇಟಿ ಮಾಡುತ್ತೇನೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಈ ಮೂಲಕ ರಾಜ್ಯದ ಕ್ಯಾಬಿನೆಟ್ ಪುನರ್ ರಚನೆಯಾಗುವುದನ್ನು ಸಿಎಂ ಸಿದ್ದರಾಮಯ್ಯ ಅವರೇ ಖಚಿತಪಡಿಸಿದ್ದಾರೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us