/newsfirstlive-kannada/media/media_files/2026/01/19/dgp-ramchandra-rao-2-2026-01-19-14-37-07.jpg)
ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ರೀಲೀಸ್!
ರಾಜ್ಯದಲ್ಲಿ ಮತ್ತೊಂದು ರಾಸಲೀಲೆ ವಿಡಿಯೋ ಬಿಡುಗಡೆಯಾಗಿದೆ. ಇದರಲ್ಲಿ ಭಾಗಿಯಾಗಿರೋದು ಯಾರೋ ರಾಜಕಾರಣಿಯಲ್ಲ. ರಾಜ್ಯದ ಡಿಜಿಪಿ ಭಾಗಿ ಆಗಿರುವ ರಾಸಲೀಲೆ ವಿಡಿಯೋ ಬಿಡುಗಡೆಯಾಗಿದೆ. ಕರ್ನಾಟಕದ ಡಿಜಿಪಿ ದರ್ಜೆಯ ಐಪಿಎಸ್ ಅಧಿಕಾರಿಯಾಗಿರುವ ಡಾ.ರಾಮಚಂದ್ರರಾವ್ ಅವರು ಮಹಿಳೆಯರ ಜೊತೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ಬಿಡುಗಡೆಯಾಗಿದೆ. ಡಿಜಿಪಿ ಕಚೇರಿಯಲ್ಲೇ ಈ ರಾಸಲೀಲೆಗಳು ನಡೆದಿವೆ. ಮಹಿಳೆಯರ ಜೊತೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ನಡೆಸುತ್ತಿರುವುದು ಸೀಕ್ರೆಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಕಚೇರಿಯಲ್ಲಿ ಕರ್ತವ್ಯದ ಸಮಯದಲ್ಲೇ ಮಹಿಳೆಯರ ಜೊತೆ ಡಾ.ರಾಮಚಂದ್ರರಾವ್ ರಾಸಲೀಲೆ ನಡೆಸಿದ್ದಾರೆ.
ಬೇರೆ ಬೇರೆ ಬಟ್ಟೆ ಧರಿಸಿ ಮಹಿಳೆಯರು ಕಚೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳೆಯರನ್ನು ತಬ್ಬಿಕೊಂಡು ಮುತ್ತು ಕೊಟ್ಟು ರಾಮಚಂದ್ರರಾವ್ ರಾಸಲೀಲೆ ನಡೆಸಿದ್ದಾರೆ. ಇದು ಪೊಲೀಸ್ ಇಲಾಖೆಯ ಶಿಸ್ತು, ಘನತೆ, ಗೌರವಕ್ಕೆ ಧಕ್ಕೆ ತರುವ ವಿಷಯ. ಮಹಿಳೆಯರನ್ನು ಬಲವಂತ ಮಾಡಿಲ್ಲದೇ ಇದ್ದರೂ, ಕಚೇರಿಯ ವೇಳೆಯಲ್ಲಿ ಪೊಲೀಸ್ ಡ್ರೆಸ್ ಧರಿಸಿ ರಾಮಚಂದ್ರ ರಾವ್ ರಾಸಲೀಲೆ ನಡೆಸಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ರಾಮಚಂದ್ರರಾವ್ ಸದ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಆಗಿದ್ದಾರೆ.
DGP ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಬಿಡುಗಡೆ ಆಗಿರುವುದು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿದೆ. ಈ ವಿಡಿಯೋದಲ್ಲಿ ಭಾಗಿಯಾಗಿರುವ ರಾಮಚಂದ್ರ ರಾವ್ ಬಗ್ಗೆ ಸಿಎಂ ಸಿದ್ದರಾಮಯ್ಯ ಕೋಪಗೊಂಡಿದ್ದಾರೆ. ಹೀಗಾಗಿ ಈ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
/filters:format(webp)/newsfirstlive-kannada/media/media_files/2026/01/19/dgp-ramchandra-rao-1-2026-01-19-16-12-43.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us