/newsfirstlive-kannada/media/media_files/2025/09/16/high-court-and-kyn-2025-09-16-16-36-34.jpg)
ಶಾಸಕ ಕೆ.ವೈ.ನಂಜೇಗೌಡ ಸುಪ್ರೀಂಕೋರ್ಟ್ ನಲ್ಲೂ ಹಿನ್ನಡೆ
ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯನ್ನು ಮತಗಳನ್ನು ಮರು ಎಣಿಕೆ ಮಾಡಬೇಕೆಂದು ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಹಾಲಿ ಶಾಸಕ ಕೆ.ವೈ.ನಂಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್ ಕೂಡ ಮರು ಮತ ಎಣಿಕೆ ಮಾಡಲು ಆದೇಶ ನೀಡಿದೆ. ಆದರೇ, ಮರು ಮತ ಎಣಿಕೆ ಮಾಡಿದ ಫಲಿತಾಂಶವನ್ನು ಘೋಷಣೆ ಮಾಡಬಾರದು. ಮರು ಮತ ಎಣಿಕೆ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್ ಗೆ ಸಲ್ಲಿಸಬೇಕೆಂದು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಇದರಿಂದಾಗಿ ಹಾಲಿ ಶಾಸಕ ಕೆ.ವೈ.ನಂಜೇಗೌಡಗೆ ಯಾವುದೇ ರಿಲೀಫ್ ಸಿಕ್ಕಿಲ್ಲ. ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ.
ಸುಪ್ರಿಂಕೋರ್ಟ್ ನಿಂದ ಮಾಲೂರು ವಿಧಾನಸಭಾ ಚುನಾವಣೆ ಪ್ರಕರಣದಲ್ಲಿ ಮಹತ್ವದ ಆದೇಶ ನೀಡಲಾಗಿದೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯನ್ನ ಮಾಡಲು ಸುಪ್ರೀಂಕೋರ್ಟ್ ಕೂಡ ಆದೇಶಿಸಿದೆ. ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್​ನಿಂದ ಸೂಚನೆ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ