/newsfirstlive-kannada/media/post_attachments/wp-content/uploads/2024/01/Yatindra.jpg)
ಬೆಳಗಾವಿ: ನಾಯಕತ್ವ ವಿಚಾರದಲ್ಲಿ ಯಾವುದೇ ಜಗಳ ಇಲ್ಲ. ಲೀಡರ್​​ಶಿಪ್ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಕ್ಲೀಯರ್ ಆಗಿ ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಮತ್ತೆ ಪುನರುಚ್ಚರಿಸಿದ್ದಾರೆ. ಇದೀಗ ಮತ್ತೊಮ್ಮೆ ನಾಯಕತ್ವ ವಿಚಾರ ಕಾಂಗ್ರೆಸ್​ನಲ್ಲಿ ಚರ್ಚೆ ಮಾಡುವಂತೆ ಮಾಡಿದೆ.
ಕಳೆದ ಎರಡು ದಿನಗಳ ಹಿಂದೆ ಡಾ.ಯತೀಂದ್ರ ಸಿದ್ದರಾಮಯ್ಯ ಇದೇ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಇದೀಗ ಅವರ ಹೇಳಿಕೆ ಮತ್ತೆ ಚರ್ಚೆಗೆ ದಾರಿಮಾಡಿಕೊಟ್ಟಿದೆ.
ಯತೀಂದ್ರ ಅವರ ಇವತ್ತಿನ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿಲ್ಲ. ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡಲಿದ್ದಾರೆ ಎಂದಷ್ಟೇ ಹೇಳಿದ್ದಾರೆ. ಪವರ್ ಶೇರಿಂಗ್ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಸಿಎಂ ಬದಲಾವಣೆ ಬಗ್ಗೆ ಮಾತಾಡದಂತೆ ತಮ್ಮ ಆಪ್ತರಿಗೂ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಡೆವಿಲ್ ಜಾತ್ರೆ.. ಹೇಗಿದೆ ದರ್ಶನ್ ಅಭಿಮಾನಿಗಳ ಆರಾಧನೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us