/newsfirstlive-kannada/media/media_files/2025/08/12/pm-modi-1-2025-08-12-21-23-41.jpg)
ಬೆಂಗಳೂರಿನ ಆರ್.ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅಂದಿನ ಸಮಾರಂಭದಲ್ಲಿ ತಾವು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ತಮ್ಮ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್ಪಿಜಿ ತಪಾಸಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು. ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ತಮಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಕೆ.ಎನ್.ರಾಜಣ್ಣ ವಜಾ ಹಿಂದೆ ತೆರೆಯ ಹಿಂದೆ ನಡೆದಿದ್ದೇನು? ಸಿದ್ದರಾಮಯ್ಯ ಮಾಡಿದ ಪ್ರಯತ್ನ ವಿಫಲವಾಗಿದ್ದೇಕೆ?
ಕಳೆದ ಆಗಸ್ಟ್ 10 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭ ನಡೆದದ್ದನ್ನು ಇಲ್ಲಿ ಸ್ಮರಿಸಬಹುದು. ಭಾನುವಾರ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಡಿಕೆ ಶಿವಕುಮಾರ್ ಬೆಳ್ಳಿ ಗಣೇಶನ ವಿಗ್ರಹವನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಅದು, ಬಿಜೆಪಿ ಶಾಸಕರೊಬ್ಬರು ಪ್ರಧಾನಿಗೆ ನೀಡಲು ತಂದಿದ್ದು, ಆದರೆ, ಕೊಟ್ಟಿದ್ದು ಮಾತ್ರ ಡಿಕೆ ಶಿವಕುಮಾರ್ ಎಂಬ ಸುದ್ದಿ ಹರಿದಾಡುತ್ತಿತ್ತು. ಇದರ ಬೆನ್ನಲ್ಲೇ ಸ್ವತಃ ಡಿಕೆ ಶಿವಕುಮಾರ್ ಹಾಗೂ ಬಿಜೆಪಿ ಶಾಸಕ ಸ್ಪಷ್ಟನೆ ನೀಡಿದ್ದು, ಬೆಳ್ಳಿ ಗಣೇಶನ ಪ್ರತಿಮೆ ವಿವಾದಕ್ಕೆ ತೆರೆ ಬಿದ್ದಿದೆ.
ಇದನ್ನೂ ಓದಿ:‘ನಿಮ್ಮನ್ನು ನಂಬಿ ನಿಮ್ಮ ಕುಟುಂಬಗಳು ಮನೆಯಲ್ಲಿ ಕಾಯ್ತಿರ್ತಾರೆ..’ KN ರಾಜಣ್ಣರಿಂದ ಬೆಂಬಲಿಗರಿಗೆ ಭಾವನಾತ್ಮಕ ನುಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ