/newsfirstlive-kannada/media/media_files/2025/10/26/kalladka-prabhakar-bhat-2025-10-26-15-29-03.jpg)
ಮಂಗಳೂರು: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.
ಯಾಕೆ ಎಫ್​ಐಆರ್​..?
ಇತ್ತೀಚೆಗೆ ಪುತ್ತೂರಿನ ಉಪ್ಪಳಿಗೆಯಲ್ಲಿ ದೀಪೋತ್ಸವ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಭಾಕರ್ ಭಟ್, ಹಿಂದೂ ಮತ್ತು ಮುಸ್ಲಿಂ ಮಹಿಳೆಯರನ್ನು ಅವಮಾನಿಸಿ ದ್ವೇಷದ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಈಶ್ವರಿ ಪದ್ಮುಂಜ ಅನ್ನೋರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಧಾರ್ಮಿಕ ದ್ವೇಷ, ಮಹಿಳೆಯರ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದ ಮೇಲೆ ಕೇಸ್ ದಾಖಲಾಗಿದೆ. BNS 79, 196, 290, 302, ಹಾಗೂ 3(5) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us