/newsfirstlive-kannada/media/media_files/2025/09/09/cm-siddu-meeting-with-mlc-2025-09-09-17-44-27.jpg)
ಕಾಂಗ್ರೆಸ್ ಪರಿಷತ್ ಸದಸ್ಯರ ಜೊತೆ ಸಿಎಂ ಸಭೆ
ಸಿಎಂ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯರ ಸಭೆ ನಡೆಸಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಶಾಸಕರ ಸಭೆಯನ್ನು ಜಿಲ್ಲಾವಾರು ನಡೆಸಿದ್ದರು. ಆದಾದ ಬಳಿಕ ಈಗ ವಿಧಾನಪರಿಷತ್‌ನ ಕಾಂಗ್ರೆಸ್ ಸದಸ್ಯರ ಸಭೆಯನ್ನು ಇಂದು ನಡೆಸಲಾಗಿದೆ. ಸಿಎಂ ನಡೆಸಿದ ಸಭೆಯಲ್ಲಿ ನಡೆದ ಮಾತುಕತೆಯ ಇನ್ ಸೈಡ್ ಡೀಟೈಲ್ಸ್ ನ್ಯೂಸ್ ಫಸ್ಟ್ ಗೆ ಲಭ್ಯವಾಗಿದೆ. ಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ಆಡಳಿತ ಪಕ್ಷದ ಪರಿಷತ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕರೆದಿದ್ದ ಸಭೆಯಲ್ಲಿ ಸಚಿವರ ನಡೆ ವಿರುದ್ಧ ಕಾಂಗ್ರೆಸ್ ಪಕ್ಷದ ಪರಿಷತ್ ಸದಸ್ಯರು ಅಸಮಾಧಾನ ಹೊರ ಹಾಕಿದ್ದಾರೆ. ಸಚಿವರು ನಮ್ಮ ಪತ್ರಗಳಿಗೆ ಮಾನ್ಯತೆಯನ್ನ ನೀಡುತ್ತಿಲ್ಲ . ಭೇಟಿಗೆ ಅವಕಾಶವನ್ನೂ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ . ದೂರವಾಣಿ ಕರೆಯನ್ನೂ ಸ್ವೀಕರಿಸೋದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಸಚಿವರಿಗೆ ಸ್ಪಂದಿಸುವಂತೆ ಸೂಚನೆ ನೀಡುತ್ತೇನೆಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನ ಪರಿಷತ್ನ ಆಡಳಿತ ಪಕ್ಷದ ಸದಸ್ಯರುಗಳ ಜೊತೆ ಸಭೆ ನಡೆಸಿ, ಗ್ಯಾರಂಟಿ ಯೋಜನೆಗಳ ಪ್ರಗತಿ, ಅಭಿವೃದ್ಧಿ ಕಾರ್ಯಕ್ರಮಗಳು, ನೆರೆ ಪರಿಹಾರ ಕಾರ್ಯಗಳು ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು. pic.twitter.com/K5bHXYjzSt
— CM of Karnataka (@CMofKarnataka) September 9, 2025
ಈ ನಡುವೆ, ಮೂವರು ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯವನ್ನು ಕೂಡ ಮಾಡಲಾಗಿದೆ. ಈಗ ಪರಿಷತ್ ಸದಸ್ಯರ ಪೈಕಿ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ . ಮುಂದಿನ ಸಂಪುಟ ಪುನಾರಚನೆ ವೇಳೆ ಮೂವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಜೊತೆಗೆ ಶಾಸಕರಿಗೆ ನೀಡಿರುವ ಶಿಷ್ಟಾಚಾರವನ್ನ ತಮಗೂ ಅನ್ವಯಿಸುವಂತೆ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯರು ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಿದ್ದಾರೆ. ಶಾಸಕರಿಗೆ ನೀಡಿರುವಂತೆ ನಮಗೂ ತಲಾ 50 ಕೋಟಿ ಅನುದಾನ ನೀಡುವಂತೆ ಪರಿಷತ್ ಸದಸ್ಯರು ಒತ್ತಾಯಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ.