/newsfirstlive-kannada/media/media_files/2025/08/28/modi-and-rahul-gandhi-together-2025-08-28-20-02-26.jpg)
ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ದೇಶದಲ್ಲಿ ಈಗ ಲೋಕಸಭಾ ಚುನಾವಣೆ ನಡೆದರೇ, ಯಾವ ಮೈತ್ರಿಕೂಟಕ್ಕೆ ಎಷ್ಟು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಿಗಲಿದೆ ಎಂಬ ಬಗ್ಗೆ ಇಂಡಿಯಾ ಟುಡೇ ಮೂಡ್ ಆಫ್ ದಿ ನೇಷನ್ ಸರ್ವೇ ನಡೆಸಿದೆ. ಈ ಸರ್ವೇಯಲ್ಲಿ ಮತ್ತೆ ಎನ್‌ಡಿಎ ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂಬ ಫಲಿತಾಂಶ ಲಭ್ಯವಾಗಿದೆ. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ 324 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಿಗಲಿದೆ. ರಾಹುಲ್ ಗಾಂಧಿ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೆ 208 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಿಗಲಿದೆ ಎಂದು ಇಂಡಿಯಾ ಟುಡೇ ಹಾಗೂ ಸಿ ವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ ಸರ್ವೇಯಿಂದ ತಿಳಿದು ಬಂದಿದೆ.
2024ರ ಮೇ ತಿಂಗಳಿನಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ 294 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಿಕ್ಕಿತ್ತು.
ಇಂಡಿಯಾ ಮೈತ್ರಿಕೂಟಕ್ಕೆ 234 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಿಕ್ಕಿತ್ತು. ಆದರೇ, ಈಗ ಲೋಕಸಭಾ ಚುನಾವಣೆ ನಡೆದರೇ, ಇಂಡಿಯಾ ಮೈತ್ರಿಕೂಟದ ಸಂಖ್ಯಾಬಲ ಕುಸಿಯಲಿದೆ. ಎನ್‌ಡಿಎ ಮೈತ್ರಿಕೂಟದ ಸಂಖ್ಯಾಬಲ ಹೆಚ್ಚಾಗಲಿದೆ ಎಂದು ಇಂಡಿಯಾ ಟುಡೇ- ಸಿ ವೋಟರ್ ಸರ್ವೇ ಹೇಳಿದೆ.
ದೆಹಲಿ, ಮಹಾರಾಷ್ಟ್ರ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಲೋಕಸಭಾ ಸಂಖ್ಯಾಬಲದಲ್ಲೂ ಹೆಚ್ಚಳವಾಗಲಿದೆ ಎಂದು ಸರ್ವೇ ಹೇಳಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ.