‘ಭ್ರಷ್ಟಾಚಾರದ ಸಾಕ್ಷ್ಯಗಳಿಗೆ ಬಿಜೆಪಿ ಬೆಂಕಿ ಇಟ್ಟಿದೆ’
ಬೆಂಕಿ ಬಿದ್ದಿರೋದು ಆಕಸ್ಮಿಕವಲ್ಲ, ಖಂಡಿತ ಷಡ್ಯಂತ್ರ
ರಾಜಕೀಯ ಚರ್ಚೆಗೆ ನಾಂದಿ ಹಾಡಿದ ಕಾಂಗ್ರೆಸ್..!
ಬಿಬಿಎಂಪಿ ಕಚೇರಿಯ ಕಾಮಗಾರಿಗಳ ‘ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ’ದಲ್ಲಿ ಕಾಮಗಾರಿಗಳ ದಾಖಲೆ ಇದ್ದಂತಹ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ ಎಂದು ರಾಜ್ಯ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಟ್ವೀಟ್ ಮಾಡಿರುವ ಕಾಂಗ್ರೆಸ್, 40 ಪರ್ಸೆಂಟ್ ಕಮೀಷನ್ನ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು, ಇದರ ಹಿಂದಿರುವ ಬಿಜೆಪಿ ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ. ಬಿಜೆಪಿ ತಾನು ಮಾಡಿದ ಭ್ರಷ್ಟಾಚಾರದ ಸಾಕ್ಷ್ಯಗಳಿಗೆ ಬೆಂಕಿ ಇಟ್ಟು ಬಚಾವಾಗಿಬಿಡುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಈ ಟ್ವೀಟ್ ಬೆನ್ನಲ್ಲೆ, ಬೆಂಕಿ ಬಿದ್ದ ಪ್ರಕರಣವು ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಜಟಾಪಟಿ ತರಕಕ್ಕೇರುವ ಲಕ್ಷಣ ಶುರುವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ