ಪೂರ್ಣಿಮಾ ಶ್ರೀನಿವಾಸ್ ಮನೆಗೆ ಡಿ.ಕೆ ಶಿವಕುಮಾರ್ ಭೇಟಿ
ಕಾಂಗ್ರೆಸ್ ಬರುವಂತೆ ಆಹ್ವಾನ ನೀಡಿದ್ರಾ..? ಕೆಪಿಸಿಸಿ ಅಧ್ಯಕ್ಷ!
ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಏನಂದ್ರು..?
ಬೆಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಿರಿಯೂರಿನ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಡಿ.ಕೆ ಶಿವಕುಮಾರ್ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಕಾಂಗ್ರೆಸ್ಗೆ ಬರುವಂತೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.
ಇನ್ನು, ಡಿ.ಕೆ ಶಿವಕುಮಾರ್ ಭೇಟಿ ಬಳಿಕ ಮಾತಾಡಿದ ಪೂರ್ಣಿಮಾ ಶ್ರೀನಿವಾಸ್, ನನಗೆ ಕಾಂಗ್ರೆಸ್ನಿಂದ ಆಹ್ವಾನ ಇದೆ. ನಾನು ಬಿಜೆಪಿಯಲ್ಲೇ ಇದ್ದೇನೆ, ಬಿಜೆಪಿ ಬಿಡೋ ಯೋಚನೆ ಮಾಡಿಲ್ಲ. ಚುನಾವಣೆಗೆ ಮುಂಚೆಯಿಂದಲೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಎಲ್ಲೂ ಬಿಜೆಪಿ ಬಿಡುತ್ತೇನೆ ಎಂದು ಹೇಳಿಲ್ಲ. ನಾನು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದರು.
ಮನೆಯಲ್ಲಿ ಹಬ್ಬ ಇತ್ತು, ಊಟಕ್ಕಾಗಿ ಡಿ.ಕೆ ಶಿವಕುಮಾರ್ ಮನೆಗೆ ಬಂದಿದ್ದರು. ನನ್ನ ತಂದೆ ಹಿಂದುಳಿದ ವರ್ಗದ ನಾಯಕ. ನನ್ನ ಅವಶ್ಯಕತೆ ಕಾಂಗ್ರೆಸ್ಸಿಗೆ ಇರಬಹುದು. ನಾನು ಹೋಗುವುದಾದ್ರೆ ಎಲ್ಲರಿಗೂ ಹೇಳಿ ಕಾಂಗ್ರೆಸ್ಗೆ ಹೋಗುತ್ತೇನೆ. ಕದ್ದು ಮುಚ್ಚಿ ನಾನು ಏನು ಮಾಡಲ್ಲ ಎಂದು ಹೇಳಿದರು.
ಯಾವುದೇ ಅಸಮಾಧಾನ ಇಲ್ಲ ಎಂದ ಪೂರ್ಣಿಮಾ ಶ್ರೀನಿವಾಸ್..!
ನನಗೆ ಬಿಜೆಪಿ ಮೇಲೆ ಯಾವುದೇ ಅಸಮಾಧಾನ ಇಲ್ಲ. ಬೇರೆಯವರಿಗೆ ಅಸಮಾಧಾನ ಇರಬಹುದು. ಏನೇ ಆಗಲೀ ಎಲ್ಲವೂ ನಿಮಗೆ ತಿಳಿಸಿಯೇ ಮಾಡುತ್ತೇನೆ ಎಂದರು. ಜತೆಗೆ ಸದ್ಯದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರ ಆಯ್ಕೆ ಆಗಲಿದೆ ಎಂದು ಕೂಡ ತಿಳಿಸಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ