newsfirstkannada.com

ಅತ್ಯಾಚಾರ ಕೇಸ್​​.. ಪ್ರಜ್ವಲ್​ ರೇವಣ್ಣಗೆ ಮತ್ತೆ ಶಾಕ್​ ಕೊಟ್ಟ ಕೋರ್ಟ್​

Share :

Published June 29, 2024 at 6:00pm

  ಅಶ್ಲೀಲ ವಿಡಿಯೋ ಪ್ರಕರಣದಡಿ ಜೈಲು ಸೇರಿರುವ ಮಾಜಿ MP

  ಜೈಲು ಅಧಿಕಾರಿಗಳಿಗೆ ಪ್ರಜ್ವಲ್​ ರೇವಣ್ಣ ಮನವಿ ಪತ್ರ ನೀಡಬೇಕು

  ಪ್ರಜ್ವಲ್​ ಪರ ವಕೀಲ ಕೋರ್ಟ್​​ಗೆ ಏನೆಂದು ಮನವಿ ಸಲ್ಲಿಸಿದರು.?

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಡಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈ ಸಂಬಂಧ 42ನೇ ಎಸಿಎಂಎಂ ಕೋರ್ಟ್​ ಆದೇಶ ನೀಡಿದೆ.

ಇದನ್ನೂ ಓದಿ: ‘ನನ್ನೂರು ಕರ್ನಾಟಕ, ಈ ನಾಡನ್ನ ಬಿಟ್ಟು ಎಲ್ಲಿಗೂ ಹೋಗಲ್ಲ’ -DGP ಕಮಲ್ ಪಂತ್

ಪ್ರಜ್ವಲ್ ರೇವಣ್ಣ ವಿರುದ್ಧದ 4ನೇ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿ ಇಂದಿಗೆ ಮುಕ್ತಾಯಗೊಂಡಿದೆ. 5 ದಿನಗಳ ಕಸ್ಟಡಿ ಇವತ್ತಿಗೆ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್​ ರೇವಣ್ಣರನ್ನ ಕೋರ್ಟ್​ಗೆ ಹಾಜರುಪಡಿಸಿದ್ದರು. ಈ ವೇಳೆ ಎಸ್​ಐಟಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಕೋರ್ಟ್​​ಗೆ ಮನವಿ ಮಾಡಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣನನ್ನ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ‌ ಆದೇಶ ನೀಡಿದ್ದಾರೆ.

ಇದನ್ನೂ ಓದಿ: ಪಟಾಕಿ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ.. ಬ್ಲಾಸ್ಟ್ ಆದ​ ರಭಸಕ್ಕೆ ಕುಸಿದು ಬಿದ್ದ ಬಿಲ್ಡಿಂಗ್.. ನಾಲ್ವರು ಸಾವು

ಇನ್ನು ಪ್ರಜ್ವಲ್​​ ರೇವಣ್ಣನನ್ನ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲ ಅರುಣ್ ಅವರು, ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದಕ್ಕೆ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ಸೂಚಿಸಿದರು. ಮನವಿ ಪತ್ರ ಸಿದ್ಧಪಡಿಸಿ ಪ್ರಜ್ವಲ್​ ರೇವಣ್ಣಗೆ ವಕೀಲ ನೀಡಿ ಜೈಲಿಗೆ ಹೋದಾಗ ಅಲ್ಲಿನ ಅಧಿಕಾರಿಗಳಿಗೆ ನೀಡುವಂತೆ ಸೂಚಿಸಿದ್ದಾರೆ. ಒಂದು ವೇಳೆ ಪ್ರಜ್ವಲ್​​ ರೇವಣ್ಣನನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಅವಕಾಶ ಕೋರಿರುವ ಅರ್ಜಿಗೆ ಜೈಲು ಅಧಿಕಾರಿಗಳು ಅವಕಾಶ ನೀಡದಿದ್ದಲ್ಲಿ ಜುಲೈ 1 ರಂದು ಅರ್ಜಿ ವಿಚಾರಣೆ ಮಾಡುವುದಾಗಿ ಕೋರ್ಟ್​ ಹೇಳಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್​​ ರೇವಣ್ಣರನ್ನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅತ್ಯಾಚಾರ ಕೇಸ್​​.. ಪ್ರಜ್ವಲ್​ ರೇವಣ್ಣಗೆ ಮತ್ತೆ ಶಾಕ್​ ಕೊಟ್ಟ ಕೋರ್ಟ್​

https://newsfirstlive.com/wp-content/uploads/2024/05/Prajwal-Revanna-Pendrive.jpg

Load More