newsfirstkannada.com

JDSನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ; ಹಾಸನ ಚುನಾವಣೆಯಲ್ಲಿ ಗೆದ್ರೆ ಸಂಸದ ಸ್ಥಾನ ಉಳಿಯುತ್ತಾ?

Share :

Published April 29, 2024 at 1:30pm

    ಜೂನ್ 4 ರಂದು ಹಾಸನ ಲೋಕಸಭಾ ಚುನಾವಣೆಯ ಫಲಿತಾಂಶ

    ಚುನಾವಣೆಯಲ್ಲಿ ಗೆದ್ದರೆ ಪ್ರಜ್ವಲ್‌ ರೇವಣ್ಣ MP ಸ್ಥಾನದಲ್ಲಿ ಮುಂದುವರಿಯುತ್ತಾರಾ?

    ಪ್ರಜಾಪ್ರತಿನಿಧಿ ಕಾಯ್ದೆಯ ಅಡಿ ಸಂಸದ ಸ್ಥಾನದಿಂದ ವಜಾಗೊಳಿಸುವ ಸಾಧ್ಯತೆ

ಬೆಂಗಳೂರು: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದ ಬಳಿಕ ಜೆಡಿಎಸ್‌ ಪಕ್ಷ ಮಹತ್ವದ ನಿರ್ಧಾರ ಕೈಗೊಂಡಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಜೆಡಿಎಸ್‌ ವರಿಷ್ಠ ಹೆಚ್‌.ಡಿ ದೇವೇಗೌಡರು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದ ಸದಸ್ಯದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಈಗ ಜೆಡಿಎಸ್ ಪಕ್ಷದಿಂದ ಉಚ್ಛಾಟನೆಯಾಗಿದ್ದಾರೆ. ಆದರೆ ಹಾಸನ ಲೋಕಸಭಾ ಚುನಾವಣೆಗೆ ಈಗಾಗಲೇ ಮತದಾನ ಮುಗಿದಿದೆ. ಜೂನ್ 4 ರಂದು ಹಾಸನ ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಇದೀಗ ಪ್ರಜ್ವಲ್ ರೇವಣ್ಣ ಅವರು ಜೆಡಿಎಸ್ ಪಕ್ಷದಿಂದ ಉಚ್ಛಾಟನೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಗೆದ್ದರೆ ಸಂಸದ ಸ್ಥಾನದಲ್ಲಿ ಮುಂದುವರಿಯುತ್ತಾರಾ ಅನ್ನೋದು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್‌ನಿಂದ ಮುಜುಗರ.. ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ?

ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸೋತರೆ ಅಶ್ಲೀಲ ವಿಡಿಯೋ ಪ್ರಕರಣದ ವಿಚಾರಣೆಯನ್ನು ಎದುರಿಸಬೇಕಾಗುತ್ತೆ. ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಗೆದ್ದರೂ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನಕ್ಕೆ ಕುತ್ತು ಬರಲಿದೆ. ಚುನಾವಣೆಯಲ್ಲಿ ಗೆದ್ದರೆ ಪ್ರಜ್ವಲ್ ರೇವಣ್ಣ ಅವರು ಸಂಸದರಾಗಿ ಮುಂದುವರಿಯುತ್ತಾರೆ. ಆದರೆ ಪ್ರಜ್ವಲ್ ರೇವಣ್ಣ ಅವರ ಮೇಲೆ SIT ತನಿಖೆ ನಡೆಯುತ್ತಿರುವುದರಿಂದ ಜೆಡಿಎಸ್‌ ಪಕ್ಷವೇ ರಾಜೀನಾಮೆ ನೀಡುವಂತೆ ಸೂಚಿಸುವ ಸಾಧ್ಯತೆ ಇದೆ. ವಿಡಿಯೋ ಪ್ರಕರಣದಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಸದ್ಯಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದೆ.

ನೈತಿಕ ಹೊಣೆ ಹೊತ್ತು ರಾಜೀನಾಮೆ?
ಹಾಸನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಗೆದ್ದರೆ ಸಂಸದ ಸ್ಥಾನದಲ್ಲಿ ಮುಂದುವರಿಯುತ್ತಾರೆ. ಆದರೆ ದೂರು ಕೊಟ್ಟವರು, ತನಿಖಾಧಿಕಾರಿಗಳು ಕೋರ್ಟ್‌ನಲ್ಲಿ ಆರೋಪ ಸಾಬೀತು ಪಡಿಸುವುದು ಬಹಳ ಮುಖ್ಯವಾಗಿದೆ. ಕೋರ್ಟ್‌ನಲ್ಲಿ ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂದು ಸಾಬೀತು ಮಾಡಿದರೆ ಪ್ರಜಾಪ್ರತಿನಿಧಿ ಕಾಯ್ದೆಯ ಅಡಿ ಸಂಸದ ಸ್ಥಾನದಿಂದ ವಜಾಗೊಳಿಸುವ ಸಾಧ್ಯತೆ ಇದೆ. ಆದರೆ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಚುನಾವಣೆಯಲ್ಲಿ ಗೆದ್ದರೂ ಜೆಡಿಎಸ್ ಪಕ್ಷ ತನಿಖೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುವಂತೆ ಸೂಚಿಸುವ ಸಾಧ್ಯತೆ ಹೆಚ್ಚಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

JDSನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ; ಹಾಸನ ಚುನಾವಣೆಯಲ್ಲಿ ಗೆದ್ರೆ ಸಂಸದ ಸ್ಥಾನ ಉಳಿಯುತ್ತಾ?

https://newsfirstlive.com/wp-content/uploads/2024/04/Prajwal-Revanna-JDS.jpg

Load More