Stop Hindi Diwas: ಹಿಂದಿ ಹೇರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಕಾಶ್ ರಾಜ್

author-image
Ganesh
Updated On
ತಿಮ್ಮಪ್ಪನ ಲಡ್ಡುವಿನಲ್ಲಿ ಕಲಬೆರಕೆ; ಪ್ರಾಯಶ್ಚಿತ್ತ ದೀಕ್ಷಾ ಕೈಗೊಂಡ ಪವನ್ ಕಲ್ಯಾಣ್
Advertisment
  • ಇಂದು ದೇಶದಲ್ಲಿ ಹಿಂದಿ ದಿವಸ್ ಆಚರಣೆ ಮಾಡ್ತಿದ್ದಾರೆ
  • ಕರವೇಯಿಂದ ಪ್ರತಿಭಟನೆ, ರಾಜ್ಯದಲ್ಲೂ ತೀವ್ರ ವಿರೋಧ
  • ಕರವೇ ಹೋರಾಟಕ್ಕೆ ಜೈ ಎಂದ ನಟ ಪ್ರಕಾಶ್ ರಾಜ್

ಹಿಂದಿ ಹೇರಿಕೆ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಗುಡುಗಿದ್ದಾರೆ. ನೀವು ಹಿಂದಿ ಮಾತನಾಡುತ್ತೀರಿ.. ಯಾಕೆಂದ್ರೆ ನಿಮಗೆ ಹಿಂದಿ ಗೊತ್ತು .. ನಮ್ಮನ್ನ ಹಿಂದಿಯಲ್ಲಿ ಮಾತಾಡಿ ಅಂತ ಒತ್ತಾಯಿಸ್ತೀರಿ ..ಯಾಕೇಂದ್ರೆ ನಿಮಗೆ ಹಿಂದಿ ಮಾತ್ರ ಗೊತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಹಿಂದಿ ಹೇರಿಕೆಯನ್ನು ನಿಲ್ಲಿಸಿ ಎಂದು ಟ್ವಿಟರ್​ನಲ್ಲಿ ಒತ್ತಾಯಿಸಿದ್ದಾರೆ. ದೇಶದಲ್ಲಿ ಇಂದು ಹಿಂದಿ ದಿವಸ್ ಆಚರಣೆ ಮಾಡ್ತಿದ್ದಾರೆ. ಹಿಂದಿ ಹೇರಿಕೆ ವಿರುದ್ಧ ‘ಕರಾಳ ದಿನ’ ಆಚರಿಸಲು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕರೆ ನೀಡಿದೆ. ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್‌) ದಲ್ಲಿ ಕರವೇ ವತಿಯಿಂದ ಪ್ರತಿಭಟನೆ ನಡೆದಿದೆ.
ಹಿಂದಿಗೆ ಅನೈತಿಕವಾಗಿ ವಿಶೇಷ ಮನ್ನಣೆ ನೀಡುವ ಸಂವಿಧಾನದ 343ರಿಂದ 351ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲಾ ಭಾಷೆಗಳೂ ಒಕ್ಕೂಟದ ದೃಷ್ಟಿಯಲ್ಲಿ ಸಮಾನ ಎಂದು ಸಾರಬೇಕು ಎಂದು ಕರವೇ ಆಗ್ರಹಿಸಿದೆ.

ಹಿಂದಿ ದಿವಸ ಎಂಬುವುದು ಅನ್ಯಭಾಷಿಕರ ಮೇಲೆ ಹಿಂದಿ ಹೇರುವ ಹುನ್ನಾರವಾಗಿದೆ. ಈ ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ. ಆದ್ದರಿಂದ ನಾವು ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ನಡೆಸಲಿದ್ದೇವೆ- ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ

ಕೇಂದ್ರ ಸರ್ಕಾರ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು 8ನೇ ಪರಿಚ್ಚೇದದಲ್ಲಿ ಉಲ್ಲೇಖಿಸಿರುವ ಎಲ್ಲಾ 22 ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ದೇಶದ ಬಹುತ್ವ, ಸಾರ್ವಭೌಮತ್ವವನ್ನು ಕಾಪಾಡಬೇಕು ಎಂದು ಕರವೇ ನಾಯಕ ನಾರಾಯಣಗೌಡ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಬಾಹ್ಯಾಕಾಶದಿಂದಲೇ ಸುದ್ದಿಗೋಷ್ಟಿ ನಡೆಸಿದ ವಿಲಿಯಮ್ಸ್; ಕಷ್ಟಗಳ ಬಗ್ಗೆ ಪತ್ರಕರ್ತರಿಗೆ ಕೊಟ್ಟ ಮಾಹಿತಿ ಏನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment