ಪ್ರಸಿದ್ಧ ತಿರುಪತಿ ದೇಗುಲದ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ
ತಿಮ್ಮಪ್ಪನ ಪ್ರಸಾದ ಲಡ್ಡುವಿಗೆ ಬಳಸೋ ತುಪ್ಪದಲ್ಲಿ ಬೀಫ್ ಟ್ಯಾಲೋ
ತುಪ್ಪದಲ್ಲಿ ಮೀನಿನ ಎಣ್ಣೆ, ಬೀಫ್ ಟ್ಯಾಲೋ ಮತ್ತು ಹಂದಿ ಕೊಬ್ಬು ಧೃಡ
ಇತ್ತೀಚೆಗಷ್ಟೇ ಪ್ರಸಿದ್ಧ ತಿರುಪತಿ ದೇಗುಲದ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಲಾಗಿದೆ ಎಂದು ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಬಳಿಕ ತಿಮ್ಮಪ್ಪನ ಪ್ರಸಾದ ಲಡ್ಡುವಿಗೆ ಬಳಸೋ ತುಪ್ಪದಲ್ಲಿ ಮೀನಿನ ಎಣ್ಣೆ, ಬೀಫ್ ಟ್ಯಾಲೋ ಮತ್ತು ಹಂದಿ ಕೊಬ್ಬು ಇತ್ತು ಎಂದು ಲ್ಯಾಬ್ ರಿಪೋರ್ಟ್ ಧೃಡಪಡಿಸಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ರು.
ಪವನ್ ಕಲ್ಯಾಣ್ ಏನಂದ್ರು?
ತಿಮ್ಮಪ್ಪನ ಲಡ್ಡುವಿನಲ್ಲಿ ಮೀನಿನ ಎಣ್ಣೆ, ಬೀಫ್ ಟ್ಯಾಲೋ ಮತ್ತು ಹಂದಿ ಕೊಬ್ಬಿರೋ ತುಪ್ಪ ಬಳಸಿದ ವಿಚಾರ ಕೇಳಿ ಶಾಕ್ ಆಗಿದೆ. ಇದಕ್ಕೆ ಕಾರಣರಾದವರನ್ನು ಕೂಡಲೇ ಅರೆಸ್ಟ್ ಮಾಡಿ ಕಠಿಣ ಶಿಕ್ಷೆ ನೀಡಲಿದ್ದೇವೆ. ಹಿಂದಿನ ಜಗನ್ ಸರ್ಕಾರ ರಚಿಸಿದ ಟಿಟಿಡಿ ಬೋರ್ಡ್ ಸದಸ್ಯರು ಇದಕ್ಕೆ ಉತ್ತರ ನೀಡಬೇಕು ಎಂದಿದ್ದರು. ಅಷ್ಟೇ ಅಲ್ಲ ದೇಶದ ಎಲ್ಲಾ ದೇವಾಲಯಗಳ ರಕ್ಷಣೆಗೆ ಸನಾತನ ಧರ್ಮ ರಕ್ಷಣಾ ಬೋರ್ಡ್ ರಚನೆ ಆಗಬೇಕು. ಇದು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗಬೇಕು ಎಂದಿದ್ದರು. ಇದಕ್ಕೀಗ ನಟ ಪ್ರಕಾಶ್ ರಾಜ್ ಕೌಂಟರ್ ನೀಡಿದ್ದಾರೆ.
Dear @PawanKalyan …It has happened in a state where you are a DCM .. Please Investigate ..Find out the Culprits and take stringent action. Why are you spreading apprehensions and blowing up the issue Nationally … We have enough Communal tensions in the Country. (Thanks to your… https://t.co/SasAjeQV4l
— Prakash Raj (@prakashraaj) September 20, 2024
ಡಿಸಿಎಂ ಪವನ್ಗೆ ಪ್ರಕಾಶ್ ರಾಜ್ ಕೌಂಟರ್
ಈ ಸಂಬಂಧ ಟ್ವೀಟ್ ಮಾಡಿರೋ ನಟ ಪ್ರಕಾಶ್ ರಾಜ್, ಡಿಸಿಎಂ ಪವನ್ ಕಲ್ಯಾಣ್ ಅವರೇ ಆಂಧ್ರದಲ್ಲಿ ನಿಮ್ಮದೇ ಸರ್ಕಾರ ಇದೆ. ಆದಷ್ಟು ಬೇಗ ತಪ್ಪಿತಸ್ಥರನ್ನು ಹುಡುಕಿ ಶಿಕ್ಷೆ ಕೊಡಿ. ಈಗಾಗಲೇ ಹಲವು ಕೋಲು ಗಲಭೆಗಳು ದೇಶದಲ್ಲಿ ನಡೆಯುತ್ತಿದೆ. ಇದಕ್ಕೆ ನೀವು ಕೋಮು ಬಣ್ಣ ಕಟ್ಟಿ ದೇಶಾದ್ಯಂತ ಗಲಭೆ ಎಬ್ಬಿಸಬೇಡಿ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಟೆಸ್ಟ್ನಲ್ಲಿ ಸ್ಫೋಟಕ ಶತಕ; ವಿಶ್ವ ಶ್ರೇಷ್ಠ ಆಟಗಾರನ ದಾಖಲೆ ಮುರಿಯಲಿದ್ದಾರೆ ಆರ್. ಅಶ್ವಿನ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ