/newsfirstlive-kannada/media/post_attachments/wp-content/uploads/2024/06/Pratap-Simha.jpg)
ಮೈಸೂರು: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ ಯದುವೀರ್ ಒಡೆಯರ್ ಬಹುತೇಕ ಮುನ್ನಡೆ ಸಾಧಿಸಿದ್ದಾರೆ. ಘೋಷಣೆಯೊಂದೇ ಬಾಕಿ ಉಳಿದಿದೆ. ಇದೀಗ ಒಡೆಯರ್​ ಮುನ್ನಡೆ ಸಾಧಿಸಿದ್ದನ್ನು ಕಂಡು ಮಾಜಿ ಸಂಸದ ಪ್ರತಾಪ್ ಸಿಂಹ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಎಂ.ಪಿ ಯದುವೀರ್ ಒಡೆಯರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ. ಯದುವೀರ್ ಒಡೆಯರ್ ಅವರ ಫೋಟೋ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ.
ಇದನ್ನೂ ಓದಿ: ಇಂದು KRS ಡ್ಯಾಂನ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ
ಇನ್ನು ಮತ ಎಣಿಕೆ ವೇಳೆ ಯದುವೀರ್ ಒಡೆಯರ್ ಗೆಲುವು ಖಚಿತ ಹಿನ್ನಲೆ ಮೈಸೂರಿನಲ್ಲಿ ಸಂಭ್ರಮ ಜೋರಾಗಿದೆ. ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಜೈಕಾರ ಕೂಗಿ ಜನರು ಸಂಭ್ರಮಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us