newsfirstkannada.com

Rain Alert: ಇಂದಿನಿಂದ 5 ದಿನ ರಾಜ್ಯದಲ್ಲಿ ಧಾರಾಕಾರ ಮಳೆಯ ಆರ್ಭಟ; ಭಾರೀ ಎಚ್ಚರಿಕೆ!

Share :

Published June 1, 2024 at 5:37pm

Update June 1, 2024 at 5:38pm

    ಸದ್ಯ ಕೇರಳ ರಾಜ್ಯವನ್ನು ಪ್ರವೇಶಿಸಿರುವ ಮುಂಗಾರು ಮಾರುತ

    ರಾಜ್ಯಕ್ಕೆ ಈ ವರ್ಷ 15 ದಿನ ಮೊದಲೇ ಮುಂಗಾರು ಪ್ರವೇಶ

    ಇಂದಿನಿಂದ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆ

ಬೆಂಗಳೂರು: ಈ ವರ್ಷ ಭಯಾನಕ ಬಿಸಿಲು ಇದರ ಜೊತೆಗೆ ಮಳೆರಾಯನ ಆರ್ಭಟವೂ ಜೋರಾಗಿರಲಿದೆ. ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ನಾಳೆಯೇ ಕರ್ನಾಟಕ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗುವ ಸಾಧ್ಯತೆ ಇದೆ. ಸದ್ಯ ಮುಂಗಾರು ಮಾರುತ ಕೇರಳ ರಾಜ್ಯವನ್ನು ಪ್ರವೇಶಿಸಿದೆ. ಕೇರಳ ಪ್ರವೇಶಿಸಿದ ನಂತರ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಲಿದೆ. ಹೀಗಾಗಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭರ್ಜರಿ ಮಳೆಯನ್ನು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿಗೆ ಮತ್ತೆ ತಂಪೆರೆದ ಮಳೆರಾಯ.. ಇಂದಿನಿಂದ ಗುಡುಗು, ಸಿಡಿಲಿನ ಆರ್ಭಟ; ಎಲ್ಲೆಲ್ಲಿ Rain ಅಲರ್ಟ್‌! 

ರಾಜ್ಯದ ರೈತರಿಗೆ ಸಿಹಿಸುದ್ದಿ!
ಇದು ನಿಜಕ್ಕೂ ರಾಜ್ಯದ ರೈತರಿಗೆ ಸಿಹಿಸುದ್ದಿ. ಕಳೆದ ವರ್ಷ ಜೂನ್ 15 ರಿಂದ ಮುಂಗಾರು ಮಾರುತ ರಾಜ್ಯಕ್ಕೆ ಪ್ರವೇಶವಾಗಿತ್ತು. ಆದ್ರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ.

ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನ ನಗರದೆಲ್ಲೆಡೆ ಮೋಡ ಕವಿದ ವಾತಾವರಣ ಇದ್ದು, ಮಹಾದೇವಪುರ ಸುತ್ತಮುತ್ತ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಸಹಕಾರ ನಗರದ ಜಿ ಬ್ಲಾಕ್‌ನ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ. ಇಂದಿನಿಂದ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇಂದು ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rain Alert: ಇಂದಿನಿಂದ 5 ದಿನ ರಾಜ್ಯದಲ್ಲಿ ಧಾರಾಕಾರ ಮಳೆಯ ಆರ್ಭಟ; ಭಾರೀ ಎಚ್ಚರಿಕೆ!

https://newsfirstlive.com/wp-content/uploads/2024/05/KOLKATHA_RAIN.jpg

Load More