ರಾಜ್ಯದಲ್ಲಿ 1 ವಾರ ಪೂರ್ವ ಮುಂಗಾರು ಮಳೆಯ ಅಬ್ಬರ.. ಯಾವ ಜಿಲ್ಲೆಯಲ್ಲಿ ಹೆಚ್ಚು ಮಳೆ? ಎಷ್ಟು ದಿನ?

author-image
admin
Updated On
Rain Alert ರಾಜ್ಯದ 14 ಜಿಲ್ಲೆಗಳಿಗೆ ಎಚ್ಚರಿಕೆ.. ಬೆಂಗಳೂರಲ್ಲಿ ಎಷ್ಟು ದಿನ ಮಳೆ ಸುರಿಯಲಿದೆ?
Advertisment
  • ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಯಲಿದೆ
  • ಹಲವು ಜಿಲ್ಲೆಗಳಿಗೆ ಗುಡುಗು ಸಹಿತ ಸಾಧಾರಣ ಮಳೆ ಮುನ್ಸೂಚನೆ
  • ಏಪ್ರಿಲ್ 12ರವರೆಗೆ ಭಾಗಶಃ ಮೋಡ ಕವಿದ ವಾತಾವರಣ

ರಾಜ್ಯದ ಹಲವೆಡೆ ಇಂದಿನಿಂದ ಒಂದು ವಾರಗಳ ಕಾಲ ಪೂರ್ವ ಮುಂಗಾರು ಮಳೆ ಮುಂದುವರಿಯಲಿದೆ. ಹವಾಮಾನ ಇಲಾಖೆ ಪೂರ್ವ ಮುಂಗಾರು ಮಳೆಯ ಬಗ್ಗೆ ಮಹತ್ವದ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕೊಡಗು, ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೋಲಾರ, ದಾವಣಗೆರೆ ಜಿಲ್ಲೆಯ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ.

publive-image

ಇಂದಿನಿಂದ ಏಪ್ರಿಲ್ 13ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಅಳಿಯ ಮನೆ ತೊಳಿಯ.. ಕಲಬುರಗಿಯಲ್ಲಿ ಅತ್ತೆ ಮನೆಗೆ ಕನ್ನ; ಲಕ್ಷ, ಲಕ್ಷ ದೋಚಿ ತಗ್ಲಾಕೊಂಡ ಭೂಪ! 

ಬೆಂಗಳೂರಲ್ಲಿ ವಾತಾವರಣ ಹೇಗಿದೆ?
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣ ಇದ್ದು, ಸಂಜೆ ಹೊತ್ತಿಗೆ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಏಪ್ರಿಲ್ 12ರವರೆಗೆ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರು ಗರಿಷ್ಠ 33.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment