ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಮಾಡಿ ಔಟ್
ಗುಜರಾತ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ
ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ
ವಿಶ್ವಕಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ-ಭಾರತ ತಂಡಗಳು ಸೆಣಸಾಟ ನಡೆಸುತ್ತಿದ್ದು, ಟಾಸ್ ಸೋತು ಬ್ಯಾಟಿಂಗ್ಗೆ ಇಳಿದಿರುವ ರೋಹಿತ್ ಪಡೆಗೆ ದೊಡ್ಡ ಆಘಾತ ಆಗಿದೆ. ಕೇವಲ 10.2 ಓವರ್ನಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಮಿಚೆಲ್ ಸ್ಟಾರ್ಕ್, ಮ್ಯಾಕ್ಸ್ವೆಲ್, ಕಮ್ಮಿನ್ಸ್ ಮಾರಕ ಬೌಲಿಂಗ್ ದಾಳಿ ನಡೆಸಿದ್ದು, ತಲಾ ಒಂದೊಂದು ವಿಕೆಟ್ ಪಡೆದುಕೊಂಡಿದ್ದಾರೆ. ಆರಂಭಿಕ ಆಟಗಾರ ಶಭ್ಮನ್ ಗಿಲ್ ಕೇವಲ 4 ರನ್ಗಳಿಸಿ ಸ್ಟಾರ್ಕ್ಗೆ ವಿಕೆಟ್ ಒಪ್ಪಿಸಿದ್ರೆ, ರೋಹಿತ್ ಶರ್ಮಾ 47 ರನ್ಗಳಿಸಿ ಔಟ್ ಆದರು.
ಇನ್ನು ಶ್ರೇಯಸ್ ಅಯ್ಯರ್ ಕ್ರೀಸ್ಗೆ ಬರುತ್ತಿದ್ದಂತೆಯೇ ಪ್ಯಾಟ್ ಕಮ್ಮಿನ್ಸ್ಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ಭಾರತ ತಂಡವು 30 ರನ್ಗಳಿಸಿದ್ದಾಗ 1 ವಿಕೆಟ್ ಉರುಳಿದ್ರೆ, 76 ರನ್ಗಳಿಗೆ 2 ವಿಕೆಟ್ ಹೋಗಿದೆ. ಮೂರನೇ ವಿಕೆಟ್ 81 ರನ್ಗೆ ಪತನವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ