newsfirstkannada.com

ಹಿರೇಮಗಳೂರು ಕಣ್ಣನ್ ವಿಚಾರದಲ್ಲಿ ಸರ್ಕಾರ ಯು-ಟರ್ನ್.. ತಹಶೀಲ್ದಾರ್​ಗೆ ಸಂಕಷ್ಟ..!

Share :

Published January 24, 2024 at 11:08am

Update January 24, 2024 at 11:14am

    10 ವರ್ಷದ ಸಂಬಳ ವಾಪಸ್ ಮಾಡುವಂತೆ ಸೂಚಿಸಿದ್ದ ತಹಶೀಲ್ದಾರ್

    ಕನ್ನಡದ ಪಂಡಿತ ಎಂದೇ ಖ್ಯಾತಿಗಳಿಸಿರುವ ಹಿರೇಮಗಳೂರು ಕಣ್ಣನ್

    ಹಿರೇಮಗಳೂರು ಕಣ್ಣನ್​ಗೆ ನೋಟಿಸ್, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವಿಟ್​

ಚಿಕ್ಕಮಗಳೂರು: ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಅವರಿಗೆ ಹಣ ವಾಪಾಸು ನೀಡುವಂತೆ ನೋಟಿಸ್​ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಹಿರೇಮಗಳೂರು ಕಣ್ಣನ್‌ಗೆ ಶಾಕ್ ಕೊಟ್ಟ ಸರ್ಕಾರ; ಕೊಟ್ಟ ಸಂಬಳ ವಾಪಸ್ ನೀಡಲು ನೋಟಿಸ್; ಯಾಕೆ?

ಈ ಬಗ್ಗೆ ತಮ್ಮ ಸಿಎಂ ಆಫ್ ಕರ್ನಾಟಕ ಎಕ್ಸ್​ ಅಕೌಂಟ್​ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದು ಬರೆದು ಸಿಎಂ ಪೋಸ್ಟ್​ ಶೇರ್ ಮಾಡಿದ್ದಾರೆ.

ಚಿಕ್ಕಮಗಳೂರು ಹೊರ ವಲಯದ ಕಲ್ಯಾಣ ಕೋದಂಡರಾಮ ದೇವಾಲಯದಲ್ಲಿ ಹಿರೇಮಗಳೂರು ಕಣ್ಣನ್ ಅವರು ಕಳೆದ 50 ವರ್ಷಗಳಿಂದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು ಸಂಬಳವಾಗಿ 7,500 ರೂಪಾಯಿ ಜಮೆ ಆಗುತ್ತಿತ್ತು. ಈ 7,500 ರೂಪಾಯಿ ನೀಡಿದ ಸಂಬಳದಲ್ಲಿ 4,500 ವಾಪಸ್ ನೀಡಲು ಚಿಕ್ಕಮಗಳೂರು ತಹಶೀಲ್ದಾರ್ ಸುಮಂತ್ ಅವರು ನೋಟಿಸ್ ನೀಡಿದ್ದರು. ಈ ಸಂಬಂಧ ಸದ್ಯ ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್​ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಿರೇಮಗಳೂರು ಕಣ್ಣನ್ ವಿಚಾರದಲ್ಲಿ ಸರ್ಕಾರ ಯು-ಟರ್ನ್.. ತಹಶೀಲ್ದಾರ್​ಗೆ ಸಂಕಷ್ಟ..!

https://newsfirstlive.com/wp-content/uploads/2024/01/CM_SIDDARAMAIAH_KANNAN.jpg

Load More