ಭಾರೀ ಮಳೆಯ ಎಚ್ಚರಿಕೆ.. ರಾಜ್ಯದ 2 ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ..

author-image
Ganesh
ಫೆಂಗಲ್ ಸೈಕ್ಲೋನ್.. ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Advertisment
  • ಕರ್ನಾಟಕದಲ್ಲಿ ಬಿರುಸುಗೊಂಡ ಮುಂಗಾರು ಮಳೆ
  • ಪ್ರಾಥಮಿಕ, ಪ್ರೌಢ ಹಾಗೂ ಅಂಗನವಾಡಿಗೆ ರಜೆ ಘೋಷಣೆ
  • ಜೂನ್ 17ವರೆಗೆ ಹವಾಮಾನ ಇಲಾಖೆ ಎಚ್ಚರಿಕೆ

ಉತ್ತರ ಕನ್ನಡ: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದೆ. ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಅಲ್ಲಿನ ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

ನಾಳೆ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರ, ಹಳಿಯಾಳ, ಮುಂಡಗೋಡ್, ದಾಂಡೇಲಿಯಲ್ಲಿ ಎಂದಿನಂತೆ ಶಾಲೆಗಳು ತೆರೆದಿರಲಿವೆ.

ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಇಂದು ಶಾಲಾ‌-ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 17 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ವಿಮಾನ ದುರಂತದಲ್ಲಿ ಒಂದು ಪಾವಡ.. ಓರ್ವ ಬದುಕಿರುವ ಬಗ್ಗೆ ಕಮಿಷನರ್ ಮಾಹಿತಿ..

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment