newsfirstkannada.com

ಕುಡಿಯೋದು ಎಳನೀರು, ಮಲಗೋದು ನೆಲದ ಮೇಲೆ.. ರಾಮನಿಗಾಗಿ ಪ್ರಧಾನಿ ಮೋದಿಯಿಂದ ವಿಶೇಷ ಕಾರ್ಯ

Share :

Published January 18, 2024 at 6:37pm

Update January 18, 2024 at 6:33pm

    ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ

    ಕಠಿಣ ನಿಯಮಗಳನ್ನು ಪಾಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ

    ದೆಹಲಿಯಲ್ಲಿ ವಿಪರೀತ ಚಳಿ ಇದ್ದರೂ ನೆಲದ ಮೇಲೆ ಮಲಗುತ್ತಿದ್ದಾರೆ

ನವದೆಹಲಿ: ಅಯೋಧ್ಯೆ ರಾಮಮಂದಿರದ ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಅನುಷ್ಠಾನ ಕೈಗೊಂಡಿದ್ದಾರೆ. ಅಯೋಧ್ಯೆಗೆ ಆಗಮಿಸುವುದಕ್ಕೂ ಮುನ್ನ ಕಠಿಣ ನಿಯಮಗಳನ್ನು ಪಾಲಿಸುತ್ತಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.

ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಮುಹೂರ್ತ ನಿಗದಿಯಾಗಿದೆ. ಜನವರಿ 21ರಂದೇ ಅಯೋಧ್ಯೆಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಕಠಿಣ ನಿಯಮಗಳನ್ನು ಪಾಲಿಸುತ್ತಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

11 ದಿನಗಳ ಕಾಲ ಅನುಷ್ಠಾನ ನಡೆಸುತ್ತಿರುವ ಪ್ರಧಾನಿ ಮೋದಿ ಪ್ರತಿನಿತ್ಯ ಎಳು ನೀರು ಮಾತ್ರ ಸೇವಿಸುತ್ತಿದ್ದಾರೆ. ಜೊತೆಗೆ ದೆಹಲಿಯಲ್ಲಿ ವಿಪರೀತ ಚಳಿ ಇದ್ದರೂ ಬ್ಲಾಂಕೆಟ್ ಹಾಸಿಕೊಂಡು ನೆಲದ ಮೇಲೆ ಮಲಗುತ್ತಿದ್ದಾರೆ.
ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಸಿದ್ಧತೆಗಳು ಭರದಿಂದ ಸಾಗಿದೆ. ಅಂದು ಮುಖ್ಯ ಯಜಮಾನರಾಗಿ ಪಾಲ್ಗೊಳ್ಳುವ ಮೋದಿ ಅವರು ಕಠಿಣ ನಿಯಮದ ಅನುಷ್ಠಾನ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ದಿನ ರಜೆ ಘೋಷಣೆ

ಈಗಾಗಲೇ ಮಹಾರಾಷ್ಟ್ರ, ಆಂಧ್ರದ ರಾಮ ದೇವಾಲಯಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಜನವರಿ 20 ರಂದು ಧನುಷ್ಕೋಟಿ, ತಿರುಚ್ಚಿಯ ರಂಗನಾಥ ಸ್ವಾಮಿ ದೇವಾಲಯಕ್ಕೂ ಭೇಟಿ ನೀಡುವ ಸಾಧ್ಯತೆ ಇದೆ.
ಜನವರಿ 22 ರಂದು ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗುವ ನರೇಂದ್ರ ಮೋದಿ ತಮ್ಮ ಕ್ಯಾಬಿನೆಟ್ ಮಂತ್ರಿಗಳಿಗೆ ವಿಶೇಷ ಮನವಿಯನ್ನು ಮಾಡಿದ್ದಾರೆ. ನಿಮ್ಮ ಮನೆಗಳಲ್ಲಿ ದೀಪಗಳನ್ನು ಹಚ್ಚಿ. ಸಾರ್ವಜನಿಕರ ಜೊತೆ ಅಯೋಧ್ಯೆಗೆ ಭೇಟಿ ನೀಡುವಂತೆ ಕ್ಯಾಬಿನೆಟ್ ಸಚಿವರಿಗೆ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕುಡಿಯೋದು ಎಳನೀರು, ಮಲಗೋದು ನೆಲದ ಮೇಲೆ.. ರಾಮನಿಗಾಗಿ ಪ್ರಧಾನಿ ಮೋದಿಯಿಂದ ವಿಶೇಷ ಕಾರ್ಯ

https://newsfirstlive.com/wp-content/uploads/2024/01/PM-modi.jpg

Load More