newsfirstkannada.com

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ.. ಯಾವ್ಯಾವ ಮಾರ್ಗವಾಗಿ ನಮೋ ಸಂಚರಿಸಲಿದ್ದಾರೆ? ಇಲ್ಲಿದೆ ಮಾಹಿತಿ​

Share :

Published August 25, 2023 at 7:15pm

Update August 25, 2023 at 7:21pm

  ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಹೇಳಲಿರುವ ನಮೋ!

  ಪ್ರಧಾನಿ ಮೋದಿ ಸಂಚರಿಸಲಿರುವ ರಸ್ತೆಗಳಲ್ಲಿ ಬಿಗಿಭದ್ರತೆ

  ಗ್ರೀಸ್​​ನಿಂದಲೇ ನೇರವಾಗಿ ನಮೋ ಬೆಂಗಳೂರಿಗೆ ಆಗಮನ

ವಿಶ್ವದ ಬಾಹ್ಯಾಕಾಶ ಯಾನದಲ್ಲಿ ಅವಿಸ್ಮರಣೀಯ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಎಲ್ಲೆಡೆ ಮೆಚ್ಚುಗೆಯ ಮಹಾಪೂರ ಹರಿದು ಬರ್ತಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಇಸ್ರೋ ಕಚೇರಿಗೆ ಭೇಟಿ ಸಿಬ್ಬಂದಿಯ ಬೆನ್ನು ತಟ್ಟಿದ್ದರು. ನಾಳೆ ಬೆಳಗ್ಗೆ ಪ್ರಧಾನಿ ಮೋದಿ ಕೂಡ ಆಗಮಿಸಿ ಇಸ್ರೋ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.

ಚಂದ್ರಯಾನ 3 ಯಶಸ್ವಿ, ಇಸ್ರೋಗೆ ನಾಳೆ ಪ್ರಧಾನಿ ಭೇಟಿ

ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಇಸ್ರೋ ಸಿಬ್ಬಂದಿಯನ್ನ ಅಭಿನಂದಿಸಲು ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 5.30ಕ್ಕೆ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಲಿರೋ ಮೋದಿ ಅಲ್ಲಿಂದ ಪೀಣ್ಯದ ಇಸ್ರೋ ಸಂಸ್ಥೆಗೆ ತೆರಳಲಿದ್ದಾರೆ. ಬೆಳಗ್ಗೆ 7 ಗಂಟೆಯಿಂದ 8 ಗಂಟೆಯವರೆಗೂ ಮೋದಿ, ಇಸ್ರೋ ಸಂಸ್ಥೆಯಲ್ಲಿ ಮಾತುಕತೆ ನಡೆಸಲಿದ್ದಾರೆ.

ನಾಳೆ ಬೆಳಗ್ಗೆ ಹೆಚ್​​ಎಎಲ್ ವಿಮಾನ​ ನಿಲ್ದಾಣದಿಂದ ಪೀಣ್ಯದವರೆಗೆ ಪ್ರಧಾನಿ ಮೋದಿ ಸಂಚರಿಸಲಿರುವ ರಸ್ತೆಗಳಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ರಸ್ತೆಯುದ್ದಕ್ಕೂ ಸುಮಾರು 2 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು,  ಮಧ್ಯರಾತ್ರಿ 2 ಗಂಟೆಯಿಂದಲೇ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತೆ. ಇನ್ನು ಪ್ರಧಾನಿ ಮೋದಿ ಸಂಚರಿಸುವ ರಸ್ತೆಗಳ ಬದಲಿಗೆ ಸಾರ್ವಜನಿಕರು ಪರ್ಯಾಯ ಮಾರ್ಗ ಬಳಕೆಗೆ ಪೊಲೀಸರು ಮನವಿ ಮಾಡಿದ್ದಾರೆ.

ಹೆಚ್‌ಎಎಲ್ ವಿಮಾನನಿಲ್ದಾಣದಿಂದ ಓಲ್ಡ್​​ ಮದ್ರಾಸ್ ರಸ್ತೆ, ಹಲಸೂರು, ಎಂ.ಜಿ.ರಸ್ತೆ, ರಾಜಭವನ, ಮೇಖ್ರಿ ಸರ್ಕಲ್, ಸದಾಶಿವನಗರ ಜಂಕ್ಷನ್, ಯಶವಂತಪುರ ಸರ್ಕಲ್, ಗೊರಗುಂಟೆಪಾಳ್ಯ, ಪೀಣ್ಯ ಮೊದಲ ಹಂತ ಅಲ್ಲಿಂದ ಜಾಲಹಳ್ಳಿ ಕ್ರಾಸ್ ಬಳಿಕ ಇಸ್ರೋ ಕಚೇರಿಗೆ ಮೋದಿ ತಲುಪಲಿದ್ದಾರೆ.

ನಾಳೆ ಪ್ರಧಾನಿ ಮೋದಿ ರೋಡ್​ ಶೋ ಇರಲ್ಲ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ

ಇನ್ನು ನಾಳೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಡೆಸಲಿದ್ದಾರೆ ಎನ್ನಲಾಗಿತ್ತು ಆದ್ರೆ ರೋಡ್ ಶೋ ಇರುವುದಿಲ್ಲ ಅಂತ ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ. ಬೆಳಗ್ಗೆ ಹೆಚ್​ಎಎಲ್​​ನಲ್ಲಿ ಸ್ವಾಗತ ಇರಲಿದೆ. ಬಳಿಕ ಇಸ್ರೋಗೆ ತೆರಳಿ ವಿಜ್ಞಾನಿಗಳ ಜೊತೆ ಸಭೆ ನಡೆಸಲಿದ್ದಾರೆ ಅಂತ ಹೇಳಿದ್ದಾರೆ.

ಅತ್ತ ದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್ ಶೃಂಗಸಭೆಯನ್ನು ಮುಗಿಸಿದ ಬಳಿಕ ಪ್ರಧಾನಿ ಗ್ರೀಸ್ ತಲುಪಿದ್ದಾರೆ. ಗ್ರೀಸ್ ರಾಜಧಾನಿ ಅಥೆನ್ಸ್​​​ಗೆ 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿದಂತಾಗಿದೆ. ಪ್ರಧಾನಿ ಮೋದಿಗೆ ಗ್ರೀಸ್​ ಪ್ರಧಾನಿ ಕರಿಯಾಕೋಸ್​ ಅದ್ಧೂರಿ ಸ್ವಾಗತ ಕೋರಿದ್ರು. ಗ್ರೀಕ್ ಅಧ್ಯಕ್ಷೆ ಕಟೆರಿನಾ ಸಕೆಲ್ಲರೊಪೌಲೌ ಪ್ರಧಾನಿ ಮೋದಿಗೆ ದಿ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಗ್ರೀಕ್ ಮತ್ತು ಭಾರತ ಸ್ನೇಹದ ಕಾರ್ಯತಂತ್ರ ಉತ್ತೇಜನ ಕುರಿತು ಮಾತುಕತೆ ನಡೆಸಿದ್ದಾರೆ. ಇನ್ನು ಗ್ರೀಸ್​​ನಿಂದಲೇ ನೇರವಾಗಿ ಬೆಂಗಳೂರಿಗೆ ನಾಳೆ ಬೆಳಗ್ಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ.. ಯಾವ್ಯಾವ ಮಾರ್ಗವಾಗಿ ನಮೋ ಸಂಚರಿಸಲಿದ್ದಾರೆ? ಇಲ್ಲಿದೆ ಮಾಹಿತಿ​

https://newsfirstlive.com/wp-content/uploads/2023/08/chandrayanna-2.jpg

Load More