ಇಂದು 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ
ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ಮಾಡಿದ ನಮೋ
24,470 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲ್ವೆ ನಿಲ್ದಾಣಗಳ ಶಂಕುಸ್ಥಾಪನೆ
ಬೆಂಗಳೂರು: ಇಂದು ದೇಶಾದ್ಯಂತ 508 ರೈಲ್ವೆ ನಿಲ್ದಾಣಗಳ ಮೇಲ್ದರ್ಜೆಗೇರಿಸುವ ಕಾಮಗಾರಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಶಂಕುಸ್ಥಾಪನೆ ನೆರೆವೇರಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಶಂಕುಸ್ಥಾಪನೆ ಮಾಡಿದ್ದಾರೆ.
ಕರ್ನಾಟಕದ ಮಂಗಳೂರು ರೈಲ್ವೆ ನಿಲ್ದಾಣ ಸೇರಿದಂತೆ ರಾಜ್ಯದಲ್ಲಿ ಒಟ್ಟು 13 ರೈಲ್ವೆ ನಿಲ್ದಾಣ ಮೇಲ್ದರ್ಜೆಗೆರಿಸಲು ಮುಂದಾಗಿದೆ. 508 ರೈಲ್ವೆ ನಿಲ್ದಾಣಗಳಿಗೆ 24,470 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿಕ್ಕಿದೆ. ಪ್ರಯಾಣಿಕರಿಗೆ ಅತ್ಯಾಧುನಿಕ ಸೌಲಭ್ಯ ನೀಡುವುದರ ಜೊತೆಗೆ ಸ್ಥಳೀಯ ಸಂಸ್ಕೃತಿ, ಪರಂಪರೆಗೆ ತಕ್ಕಂತೆ ರೈಲ್ವೆ ನಿಲ್ದಾಣದ ವಿನ್ಯಾಸ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ.
ಮೋದಿ ಕರ್ನಾಟಕದಲ್ಲಿ ಮಂಗಳೂರು, ಬಳ್ಳಾರಿ, ಗದಗ್, ಕೊಪ್ಪಳ, ಬೀದರ್, ಹರಿಹರ ರೈಲು ನಿಲ್ದಾಣ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಅಮೃತ್ ಭಾರತ್ ಯೋಜನೆಯಡಿ ದೇಶದ ರೈಲ್ವೆ ನಿಲ್ದಾಣಗಳ ಮರು ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಂದು ಬೆಳಿಗ್ಗೆ 11 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇನ್ನು ಬಳ್ಳಾರಿ ರೈಲು ನಿಲ್ದಾಣ 17 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ