newsfirstkannada.com

ವಾರಾಣಸಿಯಲ್ಲೂ ಮೋದಿ ಗೆಲುವು ಸುಲಭವಾಗಲಿಲ್ಲ; ಕಾಂಗ್ರೆಸ್ ವಿರುದ್ಧ ಗೆದ್ದ ಅಂತರ ಎಷ್ಟು?

Share :

Published June 4, 2024 at 6:01pm

  ವಾರಣಾಸಿ ಮತಎಣಿಕೆಯ ಆರಂಭದಲ್ಲಿ ನರೇಂದ್ರ ಮೋದಿಗೆ ಬಿಗ್‌ ಶಾಕ್!

  ಪ್ರಧಾನಿ ಮೋದಿ ಅವರಿಗೆ ಹಿನ್ನಡೆ ಆಗುವಂತೆ ಮಾಡಿದ್ದ ಕಾಂಗ್ರೆಸ್​ ಅಭ್ಯರ್ಥಿ

  2019ರಲ್ಲಿ 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಮೋದಿಗೆ ಹಿನ್ನಡೆ

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಏನಾಗಬಹುದು ಎಂದು ಸಾಕಷ್ಟು ಜನರು ನಿರೀಕ್ಷೆ ಇಟ್ಟುಕೊಂಡಿದ್ದರು. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ವಾರಣಾಸಿ ಲೋಕಸಭಾ ಕ್ಷೇತ್ರದ ಫಲಿತಾಂಶ ಎಲ್ಲರ ಗಮನ ಸೆಳೆದಿತ್ತು.

ಇದನ್ನೂ ಓದಿ: ಆರಂಭದಿಂದಲೂ ಭರ್ಜರಿ ಲೀಡ್.. ಡಾ.C.N ಮಂಜುನಾಥ್ ಗೆಲುವಿನ ವೇಗಕ್ಕೆ ಕಂಗಾಲಾದ ಡಿ.ಕೆ ಸುರೇಶ್

ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಸ್ಪರ್ಧಿಸಿದ್ದ ಪ್ರಧಾನಿ ಮೋದಿ ಅವರು ಜಯಭೇರಿ ಬಾರಿಸಿದ್ದಾರೆ. ಮೊದ ಮೊದಲು ಮತ ಎಣಿಕೆ ಆರಂಭವಾದಾಗ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಮುನ್ನಡೆ ಕಾಯ್ದುಕೊಂಡಿದ್ದರು. ಇದಾದ ಬಳಿಕ ಸುಮಾರು 4998 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ನಂತರ ಹಿನ್ನಡೆ ಅನುಭವಿಸಿದರು.

ಕೊನೇ ಹಂತದ ಮತ ಎಣಿಕೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸುವಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರು ವಿಫಲರಾಗಿದ್ದಾರೆ.  ಇದೀಗ ಚುನಾವಣಾ ಆಯೋಗವು ಪ್ರಧಾನಿ ಮೋದಿ ಅವರ 612970 ಮತಗಳನ್ನು ಗಳಿಸಿಕೊಂಡಿದ್ದಾರೆ ಎಂದು ಅಧಿಕೃತವಾಗಿ ಮಾಹಿತಿ ನೀಡಿದೆ. ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ ಬಿಜೆಪಿ 35, ಎಸ್‍ಪಿ 34, ಕಾಂಗ್ರೆಸ್ 8, ಆರ್​ಎಲ್‍ಡಿ 2 ಹಾಗೂ ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ 5 ಲಕ್ಷ ಮತಗಳ ಅಂತರದಲ್ಲಿ ಮೋದಿ ಅವರನ್ನು ಗೆಲ್ಲಿಸಲು ಬಿಜೆಪಿ ನಾಯಕರು ಪಣತೊಟ್ಟಿದ್ದರು. ಆದರೆ ಈ ಬಾರಿ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1.52 ಲಕ್ಷ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಾರಾಣಸಿಯಲ್ಲೂ ಮೋದಿ ಗೆಲುವು ಸುಲಭವಾಗಲಿಲ್ಲ; ಕಾಂಗ್ರೆಸ್ ವಿರುದ್ಧ ಗೆದ್ದ ಅಂತರ ಎಷ್ಟು?

https://newsfirstlive.com/wp-content/uploads/2024/06/2024-election-pm-modi.jpg

Load More