newsfirstkannada.com

ಮಣಿಪುರದಲ್ಲೂ ಶಾಂತಿ ನೆಲೆಸುವ ‘ವಿಶ್ವಾಸ’.. ಭಾಷಣದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ದಾಖಲೆ ಮುರಿದ ಪ್ರಧಾನಿ ಮೋದಿ

Share :

10-08-2023

    ಮಣಿಪುರ ಅವಿಭಾಜ್ಯ ಅಂಗ, ಜನರ ರಕ್ಷಣೆ ನಮ್ಮ ಕರ್ತವ್ಯ

    ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ಮೋದಿ ತೀವ್ರ ವಾಕ್ಸಮರ

    2 ಗಂಟೆ 12 ನಿಮಿಷ ಲಾಲ್ ಬಹದ್ದೂರ್ ಶಾಸ್ತ್ರಿ ಭಾಷಣ

ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಕಲಾಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರ ಹಿಂಸಾಚಾರದ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ವಿಪಕ್ಷಗಳ ನಾಯಕರು ಘೋಷಣೆ ಕೂಗುತ್ತಾ ಸಭಾತ್ಯಾಗ ಮಾಡಿದರು. ಧ್ವನಿಮತದ ಮೂಲಕ ವಿಶ್ವಾಸ ಮತಯಾಚನೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ಗೆದ್ದಿದೆ. ಈ ಕುರಿತು ಸದನಕ್ಕೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ, 2028ಕ್ಕೂ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಲಿವೆ. 2024ರ ಲೋಕಸಭಾ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಿ NDA ಮತ್ತೆ ಅಧಿಕಾರಕ್ಕೆ ಬರಲಿದೆ ಅನ್ನೋ ವಿಶ್ವಾಸ ವ್ಯಕ್ತಪಡಿಸಿದರು. ತಮ್ಮ ಸುದೀರ್ಘ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿರೋಧ ಪಕ್ಷಗಳ ಅವಿಶ್ವಾಸ ನಮಗೆ ಅದೃಷ್ಟ ಎಂದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನತೆಗೆ ನಮ್ಮ ಸರ್ಕಾರದ ಮೇಲೆ ವಿಶ್ವಾಸವಿದೆ ಎಂದರು. ನಮ್ಮೊಂದಿಗೆ ದೇಶದ ಕೋಟಿ, ಕೋಟಿ ಜನರಿದ್ದಾರೆ. ಹೊಸ ಸಂಕಲ್ಪದೊಂದಿಗೆ ನಾವು ಮುನ್ನಡೆಯುತ್ತೇವೆ. ನಾವು 140 ಕೋಟಿ ಜನರ ಕನಸು ನನಸಾಗಿಸುತ್ತೇವೆ ಎಂದರು. ವಿರೋಧ ಪಕ್ಷಗಳ ಅವಿಶ್ವಾಸ, ಘಮಂಡಿತನ ಇವರಲ್ಲಿ ಹೆಚ್ಚಾಗಿದೆ. ವಿರೋಧ ಪಕ್ಷದವರ ಬೈಗುಳಗಳೇ ನನಗೆ ಟಾನಿಕ್. ವಿಪಕ್ಷದವರು ಕೆಟ್ಟದು ಬಯಸಿದರೆ ಒಳ್ಳೆಯದಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇನ್ನು, ಮಣಿಪುರದ ಬಗ್ಗೆ ಉತ್ತರಿಸಿದ ಪ್ರಧಾನಿ ಮೋದಿ, ಮಣಿಪುರದಲ್ಲಿ ಶಾಂತಿ ಸ್ಥಾಪನೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಮಣಿಪುರ ನಮ್ಮ ಅವಿಭಾಜ್ಯ ಅಂಗವಾಗಿದೆ. ಮಣಿಪುರ ಜನರ ರಕ್ಷಣೆ ನಮ್ಮ ಕರ್ತವ್ಯ. ಮಣಿಪುರದ ವಿಚಾರದಲ್ಲಿ ನಿರ್ಲಕ್ಷ್ಯ ಸಾಧ್ಯವಿಲ್ಲ. ಮಣಿಪುರದಲ್ಲಿರುವ ಬಿಜೆಪಿ ಸರ್ಕಾರ ಅಲ್ಲಿ ಶಾಂತಿ ಸ್ಥಾಪಿಸಲು ಸಾಕಷ್ಟು ಶ್ರಮವಹಿಸಿದೆ. ಮಣಿಪುರದ ವಿಚಾರದಲ್ಲಿ ರಾಜಕೀಯ ಬೇಡ. ನಿಜವಾಗಿಯೂ ಅಲ್ಲಿನ ಘಟನೆ ಬಗ್ಗೆ ನಮಗೆ ನೋವಾಿಗದೆ. ಅಲ್ಲಿ ಶಾಂತಿ ಸ್ಥಾಪಿಸಲು ಎಲ್ಲರೂ ಸೇರಿ ಶ್ರಮಿಸೋಣ ಎಂದು ಪ್ರಧಾನಿ ಮೋದಿ ಹೇಳಿದರು.

ಲಾಲ್ ಬಹದ್ದೂರ್ ಶಾಸ್ತ್ರಿ ರೆಕಾರ್ಡ್ ಬ್ರೇಕ್‌!

ಲೋಕಸಭೆಯಲ್ಲಿ ಇಂದು ಸುದೀರ್ಘ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ದಾಖಲೆ ಬರೆದಿದ್ದಾರೆ. ಸರಿಯಾಗಿ 2 ಗಂಟೆ 13 ನಿಮಿಷ ಮಾತನಾಡುವ ಮೂಲಕ ನರೇಂದ್ರ ಮೋದಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು 2 ಗಂಟೆ 12 ನಿಮಿಷ ಭಾಷಣ ಮಾಡಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಮಣಿಪುರದಲ್ಲೂ ಶಾಂತಿ ನೆಲೆಸುವ ‘ವಿಶ್ವಾಸ’.. ಭಾಷಣದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ದಾಖಲೆ ಮುರಿದ ಪ್ರಧಾನಿ ಮೋದಿ

https://newsfirstlive.com/wp-content/uploads/2023/08/Modi-Lalbahadur-Shastri.jpg

Load More