ತುಮಕೂರಲ್ಲಿ ಭೀಕರ ಬಸ್ ಅಪಘಾತ.. ಉಸಿರು ಚೆಲ್ಲಿದ ಮೂವರು, 20ಕ್ಕೂ ಹೆಚ್ಚು ಮಂದಿ ಗಂಭೀರ

author-image
Bheemappa
Updated On
ತುಮಕೂರಲ್ಲಿ ಭೀಕರ ಬಸ್ ಅಪಘಾತ.. ಉಸಿರು ಚೆಲ್ಲಿದ ಮೂವರು, 20ಕ್ಕೂ ಹೆಚ್ಚು ಮಂದಿ ಗಂಭೀರ
Advertisment
  • ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗೆ ಗಾಯಾಳುಗಳ ದಾಖಲು
  • ಇನ್ನೇನು ಎರಡು ಗಂಟೆಯಲ್ಲಿ ಎಲ್ಲ ಪ್ರಯಾಣಿಕರು ಬೆಂಗಳೂರಿಗೆ ಬರ್ತಿದ್ದರು
  • ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆಯಿತಾ, ಕಾರಣವೇನು?

ತುಮಕೂರು: ಬೆಳ್ಳಂಬೆಳಗ್ಗೆ ಖಾಸಗಿ ಬಸ್​ವೊಂದು ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಉಸಿರು ಚೆಲ್ಲಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿರಾ ತಾಲೂಕಿನ ಚಿಕ್ಕನಹಳ್ಳಿ ಬ್ರಿಡ್ಜ್ ಬಳಿಯ ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ಈ ಘಟನೆ ನಡೆದಿದೆ.

ಸನ್ ರೈಸರ್ ಹೆಸರಿನ ಖಾಸಗಿ ಬಸ್​ ಗೋವಾದಿಂದ ಬೆಂಗಳೂರು ಕಡೆಗೆ ಬೆಳಗ್ಗೆ 5 ಗಂಟೆ ಸುಮಾರಿಗೆ ವೇಗವಾಗಿ ಬರುತ್ತಿತ್ತು. ಇನ್ನೇನು 2 ಗಂಟೆಯಲ್ಲಿ ಎಲ್ಲರೂ ಬೆಂಗಳೂರನ್ನು ಸೇರುತ್ತಿದ್ದರು. ಆದರೆ ಶಿರಾದ ಚಿಕ್ಕನಹಳ್ಳಿ ಬ್ರಿಡ್ಜ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ ಬಸ್​ ಒಳಗಿದ್ದ ಪ್ರಯಾಣಿಕರ ಪೈಕಿ ಮೂವರು ಕಣ್ಣು ಮುಚ್ಚಿದ್ದಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ:ಮ್ಯಾಕ್ಸ್ ಸಿನಿಮಾ ಅಮ್ಮನಿಗೆ ತೋರಿಸಬೇಕಿತ್ತು.. ಮಾತಾಡುವಾಗ ಕಿಚ್ಚ ಸುದೀಪ್ ಭಾವುಕ

publive-image

ಸದ್ಯ ಗಾಯಾಳುಗಳನ್ನು ಶಿರಾ ಹಾಗೂ ತುಮಕೂರು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಇದರಲ್ಲಿ ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವ ಕಾರಣ ಜಿಲ್ಲಾಸ್ಪತ್ರೆ ಹಾಗೂ ಸಿದ್ಧಗಂಗಾ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ಪಲ್ಟಿಯಾಗಿದ್ದಕ್ಕೆ ಕೆಲ ಸಮಯ ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳಕ್ಕೆ ತುಮಕೂರು ಎಸ್​ಪಿ ಅಶೋಕ್.ಕೆ ವೆಂಕಟ್ ಭೇಟಿ ನೀಡಿದ್ದರು. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment