/newsfirstlive-kannada/media/post_attachments/wp-content/uploads/2025/04/fire.jpg)
ಮಂಡ್ಯ: ಹೆದ್ದಾರಿಯಲ್ಲೇ ಖಾಸಗಿ ಟ್ರಾವೆಲ್ಸ್ ಬಸ್ ಹೊತ್ತಿ ಉರಿದ ಘಟನೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ.
ಇದನ್ನೂ ಓದಿ: ಸೀರೆ ಜಾಗಕ್ಕೆ ಪ್ಯಾಂಟ್ ಶರ್ಟ್.. ಶ್ರಾವಣಿ ಸುಬ್ರಹ್ಮಣ್ಯ ಕಾಂತಮ್ಮತ್ತೆಯ ರೆಬೆಲ್ ಲುಕ್ಗೆ ವೀಕ್ಷಕರು ಫಿದಾ
ಬೆಂಗಳೂರು-ಮಂಗಳೂರು ಹೈವೆಯಲ್ಲಿ 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ನಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರನ್ನ ಬಸ್ನಿಂದ ಕೆಳಗಿಳಿಸಿದ್ದಾರೆ. ಬಸ್ ನಿಲ್ಲಿಸುತ್ತಿದ್ದಂತೆ ಸ್ಥಳದಲ್ಲೇ ಉರಿದು ಭಸ್ಮವಾಗಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ ಬೆಂಕಿ ನಂದಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರು ಬದುಕುಳಿದಿದ್ದಾರೆ. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ