ಪದಗ್ರಹಣಕ್ಕೆ ಕೆಲವೇ ನಿಮಿಷಗಳು ಬಾಕಿ
ಶಾಸಕ ಎಂ.ಕೃಷ್ಣಪ್ಪ ಹಾಗೂ ಪ್ರಿಯಾಕೃಷ್ಣ ಬೆಂಬಲಿಗರ ಪ್ರತಿಭಟನೆ
24 ನೂತನ ಸಚಿವರ ಪಟ್ಟಿ ಅಂತಿಮ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರುವ 24 ನೂತನ ಸಚಿವರ ಪಟ್ಟಿ ಅಂತಿಮಗೊಂಡಿದೆ. ಇನ್ನೇನು ಕೆಲವೇ ಕ್ಷಣದಲ್ಲಿ ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇತ್ತ ಕಾಂಗ್ರೆಸ್ ಕೆಲ ನಾಯಕರಿಗೆ ಮತ್ತು ಕಾರ್ಯಕರ್ತರು ಮಂತ್ರಿ ಪಟ್ಟ ಅಲಂಕರಿಸುವ ಖುಷಿಯಲ್ಲಿದ್ದರೆ, ಮತ್ತೊಂದೆಡೆ ಕೆಲ ಕಾರ್ಯಕರ್ತರು ರಾಜಭವನದ ಮುಂದೆ ಮಂತ್ರಿ ಸ್ಥಾನ ನೀಡಿದ ನಾಯಕರ ಪರ ಪ್ರತಿಭಟನೆ ಮಾಡುತ್ತಿದ್ದಾರೆ.
ಕಾಂಗ್ರೆಸ್ ಪ್ರಕಟಿಸಿದ ಸಚಿವರ ಪಟ್ಟಿಯಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪ್ರಿಯಾಕೃಷ್ಣ ಹಾಗೂ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಅವರ ಹೆಸರನ್ನು ಕೈ ಬಿಟ್ಟಿದೆ. ಇದರಿಂದ ಅವರ ಕಾರ್ಯಕರ್ತರಿಗೆ ನೋವುಂಟಗಾಗಿದೆ. ಇಂದು ಪ್ರದಗ್ರಹಣದ ಸಮಯದಲ್ಲೇ ರಾಜಭವನದ ಮುಂಭಾಗ ಪ್ರಿಯಾಕೃಷ್ಣ ಹಾಗೂ ಎಂ.ಕೃಷ್ಣಪ್ಪ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರಿಗೆ ಮಂತ್ರಿ ಪಟ್ಟ ನೀಡಬೇಕು ಎಂದು ಭಾವಚಿತ್ರ ಹಿಡಿದುಕೊಂಡು ಪ್ರತಿಭಟಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ