/newsfirstlive-kannada/media/post_attachments/wp-content/uploads/2024/04/PRIYANKA_GANDHI_NEW.jpg)
ತಿರುವನಂತಪುರಂ: ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿರೋ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇಷ್ಟು ದಿನಗಳ ಕಾಲ ಕಾಂಗ್ರೆಸ್​​​ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಪ್ರಿಯಾಂಕ ಗಾಂಧಿ ಕೊನೆಗೂ ಚುನಾವಣಾ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಅಷ್ಟೇ ಅಲ್ಲ ಮೊದಲ ಚುನಾಣೆಯಲ್ಲೇ ಗೆಲ್ಲುವ ಭರವಸೆ ಹೊಂದಿದ್ದಾರೆ.
3 ಲಕ್ಷ ಮತಗಳಿಂದ ಗೆದ್ದಿದ್ದ ರಾಹುಲ್​​
ಈ ಹಿಂದೆ 2024ರ ಚುನಾವಣೆಯಲ್ಲಿ ರಾಹುಲ್​ ಗಾಂಧಿ ಅವ್ರು ರಾಯ್ ಬರೇಲಿ ಮತ್ತು ವಯನಾಡು ಕ್ಷೇತ್ರಗಳಲ್ಲಿ ಗೆದ್ದು ಬೀಗಿದ್ರು. ರಾಹುಲ್​ ಗಾಂಧಿ ಕಾಂಗ್ರೆಸ್​​ ವರಿಷ್ಠರಾದ ಕಾರಣ ವಯನಾಡು ಕ್ಷೇತ್ರ ಉಳಿಸಿಕೊಳ್ಳುವ ಜತೆಗೆ ಪಕ್ಷದ ಭದ್ರಕೋಟೆಯಾದ ರಾಯ್ ಬರೇಲಿಯನ್ನು ಭದ್ರಪಡಿಸಿಕೊಳ್ಳೋ ಜವಾಬ್ದಾರಿ ಇತ್ತು. ಎರಡೂ ಕ್ಷೇತ್ರಗಳಲ್ಲೂ ಗೆದ್ದ ರಾಹುಲ್​​ ಗಾಂಧಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ರು. ಇನ್ನೂ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ಮೂರು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us