newsfirstkannada.com

ದೇಶಕ್ಕಾಗಿ ನನ್ನ ತಾಯಿಯ ಮಂಗಳಸೂತ್ರ ಬಲಿದಾನ -ಮೋದಿ ಹೇಳಿಕೆ ಖಂಡಿಸಿ ಪ್ರಿಯಾಂಕ ಗಾಂಧಿ ಎಮೋಷನಲ್

Share :

Published April 24, 2024 at 6:47am

Update April 24, 2024 at 12:05pm

  ಯುದ್ಧದ ವೇಳೆ ನನ್ನ ಅಜ್ಜಿ ದೇಶಕ್ಕಾಗಿ ಚಿನ್ನ ದಾನ ಮಾಡಿದರು

  ಮೋದಿ ರೈತರ ಮಂಗಳಸೂತ್ರದ ಬಗ್ಗೆ ಯೋಚಿಸಿದ್ದಾರೆಯೇ?

  ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ 20 ಸಾವಿರ ಪತ್ರ

ಕಾಂಗ್ರೆಸ್​ ಪಕ್ಷವನ್ನು ಟೀಕಿಸುವ ಭರದಲ್ಲಿ ಪ್ರಧಾನಿ ಮೋದಿ ಹೇಳಿದ ಅದೊಂದು ಮಾತು ಭಾರೀ ಸಂಕಷ್ಟ ತಂದೊಡ್ಡಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಮಂಗಳಸೂತ್ರ, ಕೂಡಿಟ್ಟ ಹಣ, ಸಂಪತ್ತನ್ನು ಕಿತ್ತುಕೊಂಡು, ಅವರ ಪ್ರೀತಿಪಾತ್ರರಿಗೆ ನೀಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಆಪಾದಿಸಿದ್ದರು. ಇದು ಕಾಂಗ್ರೆಸ್​ ನಾಯಕರ ಕಣ್ಣನ್ನು ಕೆಂಪಾಗಿಸಿದೆ. ಪ್ರಧಾನಿಯ ಈ ಹೇಳಿಕೆ ಕಾಂಗ್ರೆಸ್​ಗೆ ಅಸ್ತ್ರವಾಗಿ ಸಿಕ್ಕಿದೆ. ಪ್ರಧಾನಿಯ ಮಂಗಳ ಸೂತ್ರ ಹೇಳಿಕೆಯನ್ನ ಪ್ರಸ್ತಾಪಿಸಿ, ಪ್ರಿಯಾಂಕಾ ಗಾಂಧಿ ಭಾವನಾತ್ಮಕವಾಗಿ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಂಗಳಸೂತ್ರವೇ ಕಿತ್ತುಕೊಳ್ಳುತ್ತದೆ ಎಂಬ ಪ್ರಧಾನಿ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಮೋದಿ ವಿರುದ್ಧ ಕಿಡಿಕಾರಿದ್ರು. ನನ್ನ ತಾಯಿಯ ಮಂಗಳ ಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ. ಪ್ರಧಾನಿ ಮೋದಿ ಅವರಿಗೆ ಮಾಂಗಲ್ಯದ ಬೆಲೆ ಗೊತ್ತಿಲ್ಲ. ಮಂಗಳಸೂತ್ರದ ಬಗ್ಗೆ ಮಾತನಾಡಿದ ಅವರಿಗೆ ನಾಚಿಕೆ ಆಗಬೇಕು ಎಂದು ಪ್ರಿಯಾಂಕಾ ಗಾಂಧಿ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ

ಇದನ್ನೂ ಓದಿ:ವಿಶ್ವಕ್ಕೆ ಮತ್ತೊಂದು ಸಾಂಕ್ರಾಮಿಕದ ಎಚ್ಚರಿಕೆ; ಎಬೋಲಾ ವೈರಸ್​ನ ಮೂಲ ‘ಕಿಟಮ್ ಗುಹೆ’ಯಿಂದ ಭಯಾನಕ ಸುದ್ದಿ!

ದೇಶಕ್ಕೆ ಸ್ವತಂತ್ರವಾಗಿ 70 ವರ್ಷಗಳಾಗಿವೆ. 55 ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಇತ್ತು. ಯಾರಾದರೂ ನಿಮ್ಮ ಮಂಗಳಸೂತ್ರವನ್ನು ಕಸಿದುಕೊಂಡಿದ್ದಾರೆಯೇ? ಯುದ್ಧ ನಡೆದಾಗ ಇಂದಿರಾ ಗಾಂಧಿಯವರು ತಮ್ಮ ಸ್ವಂತ ಚಿನ್ನವನ್ನು ದಾನ ಮಾಡಿದ್ದರು. ನನ್ನ ತಾಯಿ ಸೋನಿಯಾ ಗಾಂಧಿ ಮಂಗಳಸೂತ್ರವನ್ನು ಈ ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ. ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮಹಿಳೆಯರ ಹೋರಾಟ ಅರ್ಥವಾಗುತ್ತಿಲ್ಲ. ನರೇಂದ್ರ ಮೋದಿ ಅವರು ರೈತನ ಮೇಲೆ ಋಣಭಾರವನ್ನು ಹೇರುತ್ತಿದ್ದರು. 600 ರೈತರು ರೈತ ಚಳವಳಿಯಲ್ಲಿ ಹುತಾತ್ಮರಾಗಿದ್ದಾರೆ. ರೈತರ ಮಂಗಳಸೂತ್ರದ ಬಗ್ಗೆ ಯೋಚಿಸಿದ್ದಾರೆಯೇ? ಮತ್ತು ನೋಟು ಅಮಾನ್ಯೀಕರಣದ ಸಮಯದಲ್ಲಿ ಮಹಿಳೆಯರಿಂದ ಹಣವನ್ನು ಕಸಿದುಕೊಂಡವರು ಯಾರು?-ಪ್ರಿಯಾಂಕ ಗಾಂಧಿ, ಕಾಂಗ್ರೆಸ್​ ನಾಯಕಿ

ರಾಜಸ್ಥಾನದ ಚುನಾವಣಾ ಱಲಿಯಲ್ಲಿ ಪ್ರಧಾನಿ ಮೋದಿ ನೀಡಿದ ಹೇಳಿಕೆ ಭಾರೀ ಸಂಕಷ್ಟ ತಂದೊಡ್ಡಿದೆ. ಪ್ರಧಾನಿ ಮೋದಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಇದುವರೆಗೂ 20 ಸಾವಿರಕ್ಕೂ ಅಧಿಕ ಮಂದಿ ಪತ್ರವನ್ನು ಬರೆದಿದ್ದಾರೆ. ಕಾಂಗ್ರೆಸ್​ ಕೂಡ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇದುವರೆಗೂ ಚುನಾವಣಾ ಆಯೋಗ ಯಾವುದೇ ಕ್ರಮಗೊಂಡಿಲ್ಲ ಎಂದು ಕಾಂಗ್ರೆಸ್​ ಆರೋಪಿಸಿದೆ.

ಇದನ್ನೂ ಓದಿ:ಶ್ರೀರಾಮನ ಫೋಟೋ ಇರುವ ಪ್ಲೇಟ್​ನಲ್ಲಿ ಬಿರಿಯಾನಿ ಊಟ; ಭುಗಿಲೆದ್ದ ಮತ್ತೊಂದು ವಿವಾದ

ಮೋದಿ ವಿರುದ್ಧ ಕ್ರಮಕ್ಕೆ ಕೇಂದ್ರ ಚುನಾವಣಾ ಆಯೋಗ ಹಿಂದೇಟು ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹ ಹೆಚ್ಚಾದ ಬೆನ್ನಲ್ಲೇ ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಪ್ರತಿಕ್ರಿಯಿಸಿದೆ. ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ನೀಡಿದ ಹೇಳಿಕೆ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಪ್ರತಿಕ್ರಿಯೆ ನೀಡಿದೆ. ಒಟ್ಟಾರೆ. ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಭರದಲ್ಲಿ ಪ್ರಧಾನಿ ಮೋದಿ ನೀಡಿದ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ಕಾಂಗ್ರೆಸ್​ಗೆ ಅಸ್ತ್ರವಾಗಿ ಸಿಕ್ಕಿದ್ದು, ಮೋದಿ ವಿರುದ್ಧ ವಾಗ್ದಾಳಿ ನಡೆಸಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದೇಶಕ್ಕಾಗಿ ನನ್ನ ತಾಯಿಯ ಮಂಗಳಸೂತ್ರ ಬಲಿದಾನ -ಮೋದಿ ಹೇಳಿಕೆ ಖಂಡಿಸಿ ಪ್ರಿಯಾಂಕ ಗಾಂಧಿ ಎಮೋಷನಲ್

https://newsfirstlive.com/wp-content/uploads/2024/04/NARENDRA-MODI.jpg

Load More