newsfirstkannada.com

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಸೌಜನ್ಯ ಕೇಸ್​​; ಜು. 28ಕ್ಕೆ ನ್ಯಾಯಕ್ಕಾಗಿ ಒತ್ತಾಯಿಸಿ ಬೆಂಗಳೂರಲ್ಲಿ ಧರಣಿ

Share :

Published July 26, 2023 at 4:24pm

Update July 26, 2023 at 7:52pm

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಸೌಜನ್ಯ ಕೇಸ್​​

    ಬೆಂಗಳೂರಿನಲ್ಲಿ ಜುಲೈ 28ನೇ ತಾರೀಕು ಧರಣಿ

    ಅಪರಾಧಿಗಳಿಗೆ ಶಿಕ್ಷೆಯಾಗಲಿ ಎಂದು ಒತ್ತಾಯ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಉಜಿರೆ ಸೌಜನ್ಯ ಅತ್ಯಾಚಾರ ಕೊಲೆ ಕೇಸ್​ ಸಂಬಂಧ ಇತ್ತೀಚೆಗೆ ಸಿಬಿಐ ಕೋರ್ಟ್​​​ ಅಂತಿಮ ತೀರ್ಪು ನೀಡಿತ್ತು. ಬರೋಬ್ಬರಿ 11 ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ಅಂತಿಮ ತೀರ್ಪು ನೀಡಿದ್ದ ಸಿಬಿಐ ಕೋರ್ಟ್, ಆರೋಪಿ ಸಂತೋಷ್‌ ರಾವ್​​ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ. ಹೀಗಾಗಿ ಆರೋಪಿ ಸಂತೋಷ್‌ ರಾವ್​ ನಿರ್ದೋಷಿ ಎಂದು ನ್ಯಾಯಮೂರ್ತಿ ಸಿಬಿ ಸಂತೋಷ್‌ ನೇತೃತ್ವದ ಏಕಸದಸ್ಯ ನಾಯಪೀಠ ಆದೇಶ ಹೊರಡಿಸಿದೆ. ಈ ಬೆನ್ನಲ್ಲೀಗ ಸೌಜನ್ಯ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕೂಡಲೇ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಜುಲೈ 28ನೇ ತಾರೀಕಿನಂದು ಧರಣಿಗೆ ಮುಂದಾಗಿದೆ.

ನಗರದ ಫ್ರೀಡಂ ಪಾರ್ಕ್​ನಲ್ಲಿ ಜುಲೈ 28ನೇ ತಾರೀಕು ರಾಜ್ಯದ 60ಕ್ಕೂ ಹೆಚ್ಚು ಸಂಘಟನೆಗಳು ಈ ಧರಣಿಗೆ ಬೆಂಬಲ ವ್ಯಕ್ತಪಡಿಸಿವೆ. ಈ ಸಂಬಂಧ ನ್ಯೂಸ್​ಫಸ್ಟ್​​ ಜತೆ ಮಾತಾಡಿದ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಮುಖಂಡರು, ವಕೀಲರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ಅಖಿಲ ವಿದ್ಯಾಸಂದ್ರ ಅವರು, ಸೌಜನ್ಯ ಮೇಲೆ ನಡೆದದ್ದು ಅತ್ಯಂತ ಕ್ರೂರ ಅತ್ಯಾಚಾರ. ತಪ್ಪಿತಸ್ಥರಿಗೆ ಕೂಡಲೇ ಶಿಕ್ಷೆಯಾಗಲಿ ಎಂದರು.

ಮುಂದುವರಿದು ಸೌಜನ್ಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಶೇಷ ನ್ಯಾಯಾಲಯ ಸರಿಯಾದ ರೀತಿಯಲ್ಲಿ ತನಿಖೆ ನಡೆಸುವಂತೆ ಆದೇಶಿಸಬೇಕು. ತಪ್ಪಿತಸ್ಥರಿಗೆ ಕೂಡಲೇ ಶಿಕ್ಷೆ ಆಗಬೇಕು. ಅದಕ್ಕಾಗಿ ಎಸ್​ಐಟಿ ರಚನೆ ಮಾಡಬೇಕು. ಯಾವುದೇ ರಾಜಕೀಯ ಪ್ರಭಾವಕ್ಕೂ ಬಲಿಯಾಗದಂತೆ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

ಅಪರಾಧಿಗಳನ್ನು ಪತ್ತೆ ಮಾಡಿ ಶಿಕ್ಷಿಸುವುದು ಸರ್ಕಾರದ ಆದ್ಯ ಕರ್ತವ್ಯ. ಈ ಕರ್ತವ್ಯ ನಿಭಾಯಿಸದೆ ಹೋದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ. ನಮ್ಮ ಮನವಿಯನ್ನು ಪುರಸ್ಕರಿಸಿ ಕೂಡಲೇ ತನಿಖೆಗೆ ಆದೇಶಿಸಬೇಕು ಎಂದರು ಹಿರಿಯ ವಕೀಲರಾದ ಅಖಿಲ ವಿದ್ಯಾಸಂದ್ರ.

ಏನಿದು ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಉಜಿರೆ ಎಸ್‌ಡಿಎಂ ಕಾಲೇಜಿನಿಂದ ಮನೆಗೆ ತೆರಳುವಾಗ ನಾಪತ್ತೆಯಾಗಿದ್ದಳು. ಇದರ ಮರುದಿನ 2012ರ ಅಕ್ಟೋಬರ್‌ 9ರಂದು 17 ವರ್ಷದ ಅಪ್ರಾಪ್ತ ಬಾಲಕಿ ಸೌಜನ್ಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿ ತೀರ್ಪು ಪ್ರಕಟಿಸಿತ್ತು.

ಇದನ್ನೂ ಓದಿ: ಸೌಜನ್ಯ ಅತ್ಯಾಚಾರ ಕೊಲೆ ಕೇಸ್‌; ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದ ಕೋರ್ಟ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಸೌಜನ್ಯ ಕೇಸ್​​; ಜು. 28ಕ್ಕೆ ನ್ಯಾಯಕ್ಕಾಗಿ ಒತ್ತಾಯಿಸಿ ಬೆಂಗಳೂರಲ್ಲಿ ಧರಣಿ

https://newsfirstlive.com/wp-content/uploads/2023/07/Soujanya.webp

Load More