/newsfirstlive-kannada/media/post_attachments/wp-content/uploads/2024/08/YDR-PROTEST.jpg)
ಯಾದಗಿರಿ: ಪಿಎಸ್ಐ ಪರಶುರಾಮ ಸಾವು ಖಂಡಿಸಿ ಕಲಬುರಗಿ-ಯಾದಗಿರಿ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಯಿಮ್ಸ್ ಎದುರಿರುವ ರಾಷ್ಟ್ರೀಯ ಹೆದ್ದಾರಿ-150 ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.
ಯಾದಗಿರಿಯ ವಿವಿಧ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಘಟನೆ ನಡೆದು 18 ಗಂಟೆ ಕಳೆದರೂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿಲ್ಲ. ಪೊಲೀಸ್ ಅಧಿಕಾರಿಗೆ ಅನ್ಯಾಯ ಆದರೂ ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ವರ್ಗಾವಣೆಗೊಂಡಿದ್ದ PSI ಪರಶುರಾಮ ಹಠಾತ್ ಸಾವು; ಕುಟುಂಬಸ್ಥರಿಂದ ಗಂಭೀರ ಆರೋಪ
ಪ್ರತಿಭಟನೆ ಹಿನ್ನೆಲೆಯಲ್ಲಿ ಕಿಲೋ ಮೀಟರ್ ಅಧಿಕ ದೂರ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ, ಮಗ, ಮಾವ, ತಂದೆ ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಾವಿನ ಹಿಂದೆ ಹಲವು ಅನುಮಾನಗಳು ಇದ್ದು, ಅದರ ಬಗ್ಗೆ ತನಿಖೆ ಆಗಬೇಕು ಅನ್ನೋದು ಪ್ರತಿಭಟನಾಕಾರರ ಒತ್ತಾಯ ಆಗಿದೆ.
ಇದನ್ನೂ ಓದಿ:‘ಮಗು ಅಪ್ಪ ಎಲ್ಲಿ ಎಂದು ಕೇಳಿದ್ರೆ ನಾನು ಏನ್ ಹೇಳಲಿ..’ ಪಿಎಸ್ಐ ಪರಶುರಾಮ್ ಪತ್ನಿ ಕಣ್ಣೀರು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ