newsfirstkannada.com

×

Breaking: ಮಹಾರಾಷ್ಟ್ರದಲ್ಲಿ ಹೆಲಿಕಾಪ್ಟರ್ ಪತನ.. ಮೂರು ಸಾವು, ಭಾರೀ ಅನಾಹುತ

Share :

Published October 2, 2024 at 9:44am

Update October 2, 2024 at 9:49am

    ಮಹಾರಾಷ್ಟ್ರದ ಪುಣೆಯ ಬವ್ಧಾನ್ ಬುದ್ರುಕ್ ಗ್ರಾಮದಲ್ಲಿ ದುರ್ಘಟನೆ

    ಗ್ರಾಮಸ್ಥರಿಂದ ಪೊಲೀಸರಿಗೆ ಮಾಹಿತಿ, ರಕ್ಷಣಾ ಪಡೆ ಸ್ಥಳಕ್ಕೆ ದೌಡು

    ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ಪತನಗೊಂಡ ಹೆಲಿಕಾಪ್ಟರ್

ಮಹಾರಾಷ್ಟ್ರದ ಪುಣೆಯ ಬವ್ಧಾನ್ ಬುದ್ರುಕ್ ಗ್ರಾಮದ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಈ ಅಪಘಾತದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.

ಹೆಲಿಕಾಪ್ಟರ್ ಬಿದ್ದ ವಿಚಾರ ಗೊತ್ತಾಗುತ್ತಿದ್ದಂತೆಯೇ ಗ್ರಾಮಸ್ಥರು ಹಿಂಜೆವಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಮತ್ತು ವೈದ್ಯಕೀಯ ತಂಡ ಅಲ್ಲಿಗೆ ಆಗಮಿಸಿದೆ. ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆದ ಕೂಡಲೇ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ.

ಬೆಳಗ್ಗೆ 7:00 ರಿಂದ 7:10 ರ ನಡುವೆ ದುರ್ಘಟನೆ ಸಂಭವಿಸಿದೆ. ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಕೊಳ್ಳಲು ತನಿಖೆ ನಡೆಯುತ್ತಿದೆ. ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಪಘಾತದಿಂದಾಗಿ ಹೆಲಿಕಾಪ್ಟರ್‌ಗೆ ತೀವ್ರ ಹಾನಿಯಾಗಿದೆ. ಪತನಗೊಂಡ ಬಳಿಕ ಬೆಂಕಿ ಹೊತ್ತಿಕೊಂಡಿದೆ. ಪೈಲಟ್ ಆನಂದ್ ಟೇಕ್ ಆಫ್ ಮಾಡಿದ್ದರು.

ಇದನ್ನೂ ಓದಿ:ಅಂದದ ಬೆರಳಿಗೆ ಚಂದದ ಉಗುರು! ಕಚ್ಚುವ ರೂಢಿ ಇದೆಯೇ.. ಹಾಗಿದ್ದರೆ ನಿಮ್ಮ ಆರೋಗ್ಯ ಅಪಾಯದಲ್ಲಿದೆ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಮಹಾರಾಷ್ಟ್ರದಲ್ಲಿ ಹೆಲಿಕಾಪ್ಟರ್ ಪತನ.. ಮೂರು ಸಾವು, ಭಾರೀ ಅನಾಹುತ

https://newsfirstlive.com/wp-content/uploads/2024/10/helicopter-crash-1.jpg

Load More