ಇಂದಿಗೆ ದೊಡ್ಮನೆಯ ಕುಡಿ ಪುನೀತ್ ರಾಜ್ ಕುಮಾರ್ ಅಗಲಿ 2 ವರ್ಷ
ನಟ ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆಗೆ ಕಂಠೀರವ ಸ್ಟುಡಿಯೋದಲ್ಲಿ ಸಿದ್ಧತೆ
ಅಶ್ವಿನಿ ಪುನೀತ್ ಮತ್ತು ಮಕ್ಕಳು, ರಾಘಣ್ಣ, ಶಿವರಾಜ್ಕುಮಾರ್ರಿಂದ ಪೂಜೆ
ದೊಡ್ಮನೆಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲ ಅಗಲಿ ಇಂದಿಗೆ ಎರಡು ವರ್ಷಗಳೇ ಕಳೆದಿದೆ. ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ. ನೆಚ್ಚಿನ ನಟನ ಪುಣ್ಯ ಸ್ಮರಣೆಯ ಕಾರ್ಯಕ್ರಮಕ್ಕೆ ಅಭಿಮಾನಿಗಳು ಮತ್ತು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆಯಿಂದಲೇ ಅಭಿಮಾನಿಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಬಣ್ಣ ಬಣ್ಣದ ಹೂವುಗಳು, ಲೈಟಿಂಗ್ಸ್ನಿಂದ ಅಲಂಕಾರ ಮಾಡಿದ್ದಾರೆ. ಇನ್ನೂ ಅಪ್ಪು ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅಭಿಮಾನಿಗಳು ನೇತ್ರದಾನ, ಅನ್ನದಾನ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಇನ್ನೂ, ಕುಟುಂಬವು ಡಾ.ರಾಜಕುಮಾರ್ ಸಮಾಧಿ ಮಾದರಿಯಲ್ಲೇ ಅಪ್ಪು ಅವರ ಸಮಾಧಿಯನ್ನು ನಿರ್ಮಾಣ ಮಾಡಿದೆ. ಬಿಳಿ ಮಾರ್ಬಲ್ಸ್ ಬಳಸಿಕೊಂಡು ಅಪ್ಪು ಸಮಾಧಿಯನ್ನು ನಿರ್ಮಾಣ ಮಾಡಲಾಗಿದೆ. ಸ್ಮಾರಕದ ಸುತ್ತಲೂ ಸಾದೇನಹಳ್ಳಿ ಕಲ್ಲಿನ ಚಪ್ಪಡಿ ಹೊದಿಸಲಾಗಿದೆ. ಸಮಾಧಿ ಮೇಲೆ ಅಪ್ಪುವಿನ ನಗುಮೊಗದ ಫೋಟೋ ಇಡಲಾಗಿದೆ. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಡಾ.ರಾಜ್ ಕುಟುಂಬ ಸಮಾಧಿಗೆ ಬಂದು ಪೂಜೆ ಸಲ್ಲಿಸಲಿದೆ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಮತ್ತು ಡಾ.ರಾಜಕುಮಾರ್ ಸಮಸ್ತ ಕುಟುಂಬ ಪೂಜೆಯಲ್ಲಿ ಭಾಗಿಯಾಗಲಿದೆ.
2021 ಅಕ್ಟೋಬರ್ 29ರಂದು ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅಂದಿನಿಂದ ಇಂದಿನವರೆಗೂ ಅಪ್ಪು ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಲೇ ಇದ್ದಾರೆ. ಪುನೀತ್ ರಾಜ್ ಕುಮಾರ್ ಮರಣದ ನಂತರ ಸರಕಾರ ಕೂಡ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು. ಇಂದು ಪುನೀತ್ ರಾಜ್ ಕುಮಾರ್ ಅಗಲಿ 2 ವರ್ಷ ಆಗಿದೆ. ಹೀಗಾಗಿ ಪುಣ್ಯಸ್ಮರಣೆಗೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ