ಸಿದ್ಧಗಂಗಾ ಮಠದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಚಾರಿಟಬಲ್ ಟ್ರಸ್ಟ್ ಪುಣ್ಯ ಕಾರ್ಯ; ಫೋಟೋಗಳು ಇಲ್ಲಿವೆ!

author-image
admin
Updated On
ಸಿದ್ಧಗಂಗಾ ಮಠದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಚಾರಿಟಬಲ್ ಟ್ರಸ್ಟ್ ಪುಣ್ಯ ಕಾರ್ಯ; ಫೋಟೋಗಳು ಇಲ್ಲಿವೆ!
Advertisment
  • ಜೊತೆಗಿರದ ಜೀವ ಎಂದಿಗೂ ಜೀವಂತ ಪುನೀತ್ ರಾಜ್‌ಕುಮಾರ್!
  • ಡಾ. ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ಸಾಮಾಜಿಕ ಸೇವಾ ಕಾರ್ಯ
  • ಶ್ರೀ ಸಿದ್ಧಗಂಗಾ ಮಠದಲ್ಲಿ ಬಹಳ ಅರ್ಥಪೂರ್ಣವಾದ ಕಾರ್ಯಕ್ರಮ

ಜೊತೆಗಿರದ ಜೀವ ಎಂದಿಗೂ ಜೀವಂತ ನಮ್ಮ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್. ಅಪ್ಪು ಮಾಡಿರೋ ಸಾಮಾಜಿಕ ಸೇವೆ ಅವರನ್ನ ಎಂದಿಗೂ ಅಜರಾಮರವಾಗಿಸಿದೆ. ಇದೀಗ ಪುನೀತ್ ರಾಜ್‌ಕುಮಾರ್ ಅವರ ಈ ಸೇವೆಯನ್ನ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಮುಂದುವರಿಸಿದ್ದಾರೆ.

publive-image

ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆಯಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಚಾರಿಟಬಲ್ ಟ್ರಸ್ಟ್ ಅನ್ನು ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಹಾಗು ಹಿರಿಯ ಚಿತ್ರ ನಟ ಶ್ರೀ ದೊಡ್ಡಣ್ಣನವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಗಿದೆ.

publive-image

ಇದೇ ವೇಳೆ ಶಂಕರ ಕಣ್ಣಿನ ಆಸ್ಪತ್ರೆ, ಟೈಟಾನ್ ಕಂಪನಿ, ಡಿ.ಎ. ಮಂಜು ಚಾರಿಟಬಲ್ ಟ್ರಸ್ಟ್ (ರಿ), ಮೈಕ್ರೋ ಲ್ಯಾಬ್ಸ್ ಪ್ರೈ.ಲಿ., ಕೆಮಿಸ್ಟ್ ಅಂಡ್ ಡ್ರಗ್ಗಿಷ್ಟ್ ಫೌಂಡೇಷನ್ ಟ್ರಸ್ಟ್ (ರಿ), ಸಹಯೋಗದೊಂದಿಗೆ ಶ್ರೀ ಮಠದ ಮಕ್ಕಳಿಗೆ ಹಾಗು ಸಿಬ್ಬಂದಿ ವರ್ಗದವರಿಗೆ ಉಚಿತ ಕನ್ನಡಕಗಳ ವಿತರಣೆ ನೆರವೇರಿತು.

ಇದನ್ನೂ ಓದಿ: ಅಪ್ಪು ಆಪ್ತ ಮ್ಯಾನೇಜರ್ ಮಗನ ಮದುವೆಯಲ್ಲಿ ಶಿವಣ್ಣ, ಅಶ್ವಿನಿ ಪುನೀತ್ ರಾಜ್‌ಕುಮಾರ್; ಫೋಟೋಗಳು ಇಲ್ಲಿವೆ! 

publive-image

ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಲು ಅವಕಾಶ ನೀಡಿದ್ದಕ್ಕಾಗಿ ನಾವು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Advertisment