/newsfirstlive-kannada/media/post_attachments/wp-content/uploads/2025/02/sanjana-.jpg)
ಪುಟ್ಟಕ್ಕನ ಮಕ್ಕಳು ಧಾರಾವಾಹಿಯ ಮೂಲಕ ಸ್ನೇಹಾ ಪಾತ್ರದಲ್ಲಿ ನಟಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ನಟಿ ಸಂಜನಾ ಬುರ್ಲಿ. ಪುಟ್ಟಕ್ಕನ ಮಕ್ಕಳು ಸೀರಿಯಲ್ನಿಂದ ಆಚೆ ಬಂದಿದ್ದ ನಟಿ ಸಂಜನಾ ಬುರ್ಲಿ ಸದ್ಯ ದೇಶ ವಿದೇಶ ಸುತ್ತುವಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.
ಇದನ್ನೂ ಓದಿ:ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಪ್ರಕರಣಕ್ಕೆ ಟ್ವಿಸ್ಟ್ ಸಿಗಲಿದೆ ಎಂದ ಸ್ನೇಹಮಯಿ ಕೃಷ್ಣ ಪರ ವಕೀಲ
ಇದೀಗ ನಟಿ ಸಂಜನಾ ಬುರ್ಲಿ ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮುಂದೆ ನಿಂತುಕೊಂಡು ರೀಲ್ಸ್ ಮಾಡಿದ್ದಾರೆ. ಇದೇ ವಿಡಿಯೋವನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಬುರ್ಜ್ ಖಲೀಫಾ ಮುಂದೆ ನಿಂತುಕೊಂಡು ಟ್ರೆಂಡಿಂಗ್ ಸಾಂಗ್ಗೆ ಮಸ್ತ್ ರೀಲ್ಸ್ ಮಾಡಿದ್ದಾರೆ.
View this post on Instagram
ಇದೇ ವಿಡಿಯೋ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಸೂಪರ್ ಅಕ್ಕ, ಮತ್ತೆ ನಿಮ್ಮನ್ನು ನೋಡಿ ಫುಲ್ ಖುಷಿ ಆಯ್ತು, ನೀವು ಇಲ್ಲದ ಸೀರಿಯಲ್ ಅನ್ನು ನಾವು ನೋಡೋದಿಲ್ಲ ಮೇಡಂ ಅಂತ ಫ್ಯಾನ್ಸ್ ಬೇಸರ ಹೊರ ಹಾಕಿದ್ದಾರೆ. ಇನ್ನೂ ನಟಿ ಸಂಜನಾ ಬುರ್ಲಿ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಌಕ್ಟೀವ್ ಆಗಿದ್ದಾರೆ. ಹೊಸ ಹೊಸ ಫೋಟೋಸ್ಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ