/newsfirstlive-kannada/media/post_attachments/wp-content/uploads/2023/11/R-Ashok-2.jpg)
ಬೆಂಗಳೂರು: ವಿರೋಧ ಪಕ್ಷದ ನಾಯಕರಾಗಿ ಆರ್​​.ಅಶೋಕ್​​ ಆಯ್ಕೆಯಾಗಿದೆ. ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಶೋಕ್​​ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಶಾಸಕರ ಅಭಿಪ್ರಾಯ ಪಡೆದು ದೆಹಲಿಯಿಂದ ಬಂದಿದ್ದ ವೀಕ್ಷಕರು ಅಶೋಕ್ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದು 6 ತಿಂಗಳಾದ್ರೂ ವಿರೋಧ ಪಕ್ಷ ನಾಯಕ ಆಯ್ಕೆಯಾಗಿರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆ ಬಳಿಕ ಇದೀಗ ವಿಪಕ್ಷ ನಾಯಕನ ಆಯ್ಕೆಯನ್ನು ಬಿಜೆಪಿ ಹೈಕಮಾಂಡ್ ಮಾಡಿ ಮುಗಿಸಿದೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಈ ಸಮಯದಲ್ಲಿ ರಾಜ್ಯ ಬಿಜೆಪಿ ವಿಜಯೇಂದ್ರ ಹಾಗೂ ಅಶೋಕ್ ಅವರಿಗೆ ಮಹತ್ವದ ಹೊಣೆಗಾರಿಕೆಯನ್ನು ನೀಡಿದೆ.
ಇದನ್ನೂ ಓದಿ: BREAKING: ಆರ್. ಅಶೋಕ್ಗೆ ವಿಪಕ್ಷ ನಾಯಕನ ಪಟ್ಟ ಬಹುತೇಕ ಖಚಿತ; ಕಾರಣವೇನು?
ನಿಜವಾಯ್ತು ನ್ಯೂಸ್ ಫಸ್ಟ್ ಚಾನೆಲ್ ವರದಿ!
ವಿಪಕ್ಷ ನಾಯಕನಾಗಿ ಆರ್.ಅಶೋಕ್ ಅವರ ಆಯ್ಕೆ ಬಹುತೇಕ ಖಚಿತ ಎಂದು ನ್ಯೂಸ್ ಫಸ್ಟ್ ಚಾನೆಲ್ ವರದಿ ಮಾಡಿತ್ತು. ಬಿಜೆಪಿ ಉನ್ನತ ಮೂಲಗಳ ಪ್ರಕಾರ ಆರ್. ಅಶೋಕ್ ಅವರನ್ನೇ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಲಿದೆ ಎಂದು ಹೇಳಲಾಗಿತ್ತು. ಇದೀಗ ನ್ಯೂಸ್ ಫಸ್ಟ್ ವರದಿ ನಿಜವಾಗಿದ್ದು, ಕರ್ನಾಟಕದ ವಿಪಕ್ಷ ನಾಯಕರಾಗಿ ಆರ್.ಅಶೋಕ್ ಅವರನ್ನೇ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us