/newsfirstlive-kannada/media/post_attachments/wp-content/uploads/2024/11/Team-India-Test-1.jpg)
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿ ಈಗಾಗಲೇ ಶುರುವಾಗಿದೆ. ಪರ್ತ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿದೆ.
ಇನ್ನು, ಡಿಸೆಂಬರ್ 6ನೇ ತಾರೀಕಿನಿಂದ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್ ಶುರುವಾಗಲಿದೆ. ಈ ಮಹತ್ವದ ಟೆಸ್ಟ್ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಭಾರತ ತಂಡ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ವಿರುದ್ಧ ಇನ್ನೂ 4 ಪಂದ್ಯಗಳು ಆಡಬೇಕಿದೆ. ಇದರ ಮಧ್ಯೆ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರೋ 2ನೇ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್ ಎಲೆವೆನ್ ಹೇಗಿರಲಿದೆ? ಅನ್ನೋ ಚರ್ಚೆ ಜೋರಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಔಟ್ ಆಗಿದ್ರು. ಈಗ ಇವರು 2ನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಸೇರಿಕೊಂಡಿದ್ದಾರೆ. 4 ಟೆಸ್ಟ್ ಪಂದ್ಯಗಳು ಕ್ರಮವಾಗಿ ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿವೆ.
ಇತಿಹಾಸ ನಿರ್ಮಿಸಿದ್ದ ಭಾರತ ತಂಡ
ಹಲವು ವರ್ಷಗಳಿಂದ ಟೀಮ್ ಇಂಡಿಯಾ ಬಾರ್ಡರ್ ಗವಾಸ್ಕರ್ ಟೆಸ್ಟ್ ಟೂರ್ನಿ ಗೆಲ್ಲುತ್ತಲೇ ಬರುತ್ತಿದೆ. 2018-19 ಮತ್ತು 2020-21ರ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಭಾರತ ಈ ಹಿಂದಿನ ಎರಡೂ ಪ್ರವಾಸದಲ್ಲೂ ಕಾಂಗರೂ ತಂಡ 2-1 ಅಂತರದಿಂದ ಸೋಲಿಸಿತ್ತು. ಈಗ ಟೀಮ್ ಇಂಡಿಯಾ ಹ್ಯಾಟ್ರಿಕ್ ಟೆಸ್ಟ್ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
ಅಡಿಲೇಡ್ನಲ್ಲಿ ನಡೆಯಲಿರೋ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜತೆಗೆ ಕೆ.ಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ರೋಹಿತ್ ಶರ್ಮಾ ಮಿಡಲ್ ಆರ್ಡರ್ನಲ್ಲಿ ಬ್ಯಾಟಿಂಗ್ ಮಾಡಬಹುದು. 3ನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್, 4ನೇ ಕ್ರಮಾಂಕದಲ್ಲಿ ಕೊಹ್ಲಿ ಆಡಲಿದ್ದಾರೆ. ವಿಕೆಟ್ ಕೀಪರ್-ಬ್ಯಾಟರ್ ರಿಷಬ್ ಪಂತ್ 5ನೇ ಕ್ರಮಾಂಕ ಮತ್ತು ಧೃವ್ ಜುರೆಲ್ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಬ್ಯಾಟಿಂಗ್ ಮಾಡಲಿದ್ದಾರೆ. ಆಲ್‌ರೌಂಡರ್ ನಿತೀಶ್ ಕುಮಾರ್ ಕೂಡ ತಂಡದ ಭಾಗವಾಗಿ ಇರಲಿದ್ದಾರೆ. 2ನೇ ಟೆಸ್ಟ್ ಪಂದ್ಯದಿಂದಲೂ ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ತಂಡದಿಂದ ಹೊರಗೆ ಉಳಿಯಬಹುದು.
ಇದನ್ನೂ ಓದಿ: ಫಾರೀನ್ ಕೆಲಸ; ಲಕ್ಷ ಲಕ್ಷ ಸಂಬಳ; ಆದ್ರೂ ಮದುವೆ ಆಗೋಕೆ ಸಿಗಲ್ಲ ಹುಡುಗಿಯರು; ಕಾರಣವೇನು?
ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ಯಶಸ್ವಿ ಜೈಸ್ವಾಲ್, ಕೆ.ಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಆಕಾಶದೀಪ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ