/newsfirstlive-kannada/media/post_attachments/wp-content/uploads/2024/06/darshan-14-1.jpg)
ದರ್ಶನ್​​ ಮತ್ತು ಗ್ಯಾಂಗ್​​ ಹತ್ಯೆ ಪ್ರಕರಣದ ಕುರಿತು ಡಿಂಪಲ್​ ಕ್ವೀನ್​ ರಚಿತಾ ರಾಮ್​ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಡಲ್ಲಿ ಕಾನೂನಾತ್ಮಕವಾಗಿ ನ್ಯಾಯ ಸಿಗಲಿ ಎಂದು ಬರೆದುಕೊಂಡಿದ್ದಾರೆ.
ಇನ್​ಸ್ಟಾದಲ್ಲಿ ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ ಎಂದು ಪೋಸ್ಟ್​ ಹಂಚಿಕೊಂಡ ರಚಿತಾ ರಾಮ್​. ‘ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು. ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ’ ಎಂದು ಬರೆದುಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2024/06/rachita-ram.jpg)
ಜೊತೆಗೆ ನಟ ದರ್ಶನ್​ ಬಗ್ಗೆ 'ನನ್ನನ್ನ ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದಲ್ಲಿ ತಪ್ಪುಗಳನ್ನ ತಿದ್ದಿ ಮಾರ್ಗದರ್ಶನ ನೀಡಿದವರು ದರ್ಶನ್ ಸರ್. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋದು ನಂಬಲು ಕಷ್ಟ. ಪೊಲೀಸರ ತನಿಖೆಯಲ್ಲಿ ಸತ್ಯ ಹೊರಬರಲಿದೆ’ ಎಂದು ನಟಿ ರಚಿತಾ ರಾಮ್ ಬರೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us