ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ
ರಾಧಾ ರಮಣ ಧಾರಾವಾಹಿಯಲ್ಲಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ
ಮುಂಜಾನೆ ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ದುರಂತ
ಬೆಂಗಳೂರು: ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
ಇಂದು ಮುಂಜಾನೆ ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ನಟಿ ಪವಿತ್ರ ಜಯರಾಂ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದೆ. ದುರಂತದಲ್ಲಿ ಪವಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೆಹಬೂಬ್ ನಗರದಲ್ಲಿ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ನಾಳೆ ಪವಿತ್ರಾ ಜಯರಾಂ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ರವಾನೆ ಮಾಡಲಾಗುತ್ತಿದೆ.
ಪವಿತ್ರ ಜಯರಾಂ ಅವರು ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ಕನ್ನಡದ ರೋಬೋ ಫ್ಯಾಮಿಲಿಯಲ್ಲಿ ಕಿರುತೆರೆಗೆ ಎಂಟ್ರಿಕೊಟ್ಟಿದ್ದರು.
ಇದನ್ನೂ ಓದಿ: ವೀಕೆಂಡ್ನಲ್ಲಿ ಮೋಜು-ಮಸ್ತಿ ಮಾಡುವವರೇ.. ಹುಷಾರ್! ಸ್ನೇಹಿತರೊಂದಿಗೆ ಈಜಲು ಹೋದವನು ನಾಪತ್ತೆ
ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದರು. ಮೂಲತಃ ಕನ್ನಡಿಗರಾದ ಪವಿತ್ರ ಜಯರಾಂ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ತೆಲುಗಿನ ತ್ರಿನಯನಿ ಮೂಲಕ ತೆಲುಗರ ಮನೆ ಮಾತಾಗಿದ್ದ ಪವಿತ್ರ ಇಂದು ಮುಂಜಾನೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ