ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ
ವಿಜಯೇಂದ್ರಗೆ ಭಾವುಕಾರಿ ಶುಭಾಶಯ ಕೋರಿದ ರಾಘವೇಂದ್ರ
ಮಾಜಿ ಸಿಎಂ ಬಿಎಸ್ವೈ ಪುತ್ರ ರಾಘವೇಂದ್ರರಿಂದ ಶುಭಾಶಯ..!
ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಹಾರ್ದಿಕ ಶುಭಾಶಯಗಳು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಮತ್ತು ಸಹೋದರ ಸಂಸದ ಬಿ.ವೈ ರಾಘವೇಂದ್ರ ಟ್ವೀಟ್ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರೋ ಸಂಸದ ಬಿ.ವೈ ರಾಘವೇಂದ್ರ, ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಬೆಂಬಲದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಮುನ್ನಡೆಸುತ್ತಾರೆ. ಮಾಜಿ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರು, ದಿ. ಶ್ರೀ ಅನಂತಕುಮಾರ್ ಅವರೇ ಮುಂತಾದ ನಾಯಕರುಗಳ ದಾರಿಯಲ್ಲಿ ನಡೆಯುತ್ತಾರೆ ಅನ್ನುವ ಭರವಸೆ ನನಗಿದೆ. ಅವರ ನಾಯಕತ್ವದಲ್ಲಿ ಪಕ್ಷ ಹೊಸ ಚೈತನ್ಯದೊಂದಿಗೆ ಬೆಳೆಯಲಿ, ರಾಜ್ಯವನ್ನು ಆವರಿಸಿಕೊಂಡಿರುವ ಕಾಂಗ್ರೆಸ್ ದುರಾಡಳಿತದ ಕಾರ್ಮೋಡದ ನಡುವೆ ಭರವಸೆಯ ಒಂದು ಹೊಸ ಕಿರಣವಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಹೀನಾಯ ಸೋಲು ಕಂಡಿದ್ದ ಬಿಜೆಪಿ
ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತ್ತು. ಈ ಸೋಲಿಗೆ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಂಬ ಮಾತುಗಳು ಕೇಳಿ ಬಂದಿದ್ದವು. ಹಲವು ಬಿಜೆಪಿ ನಾಯಕರು ನಳಿನ್ ಕುಮಾರ್ ಕಟೀಲ್ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದ್ದರು. ಕೂಡಲೇ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲೇಬೇಕು ಅನ್ನೋ ಕೂಗು ಕೇಳಿ ಬಂದಿತ್ತು.
ಇನ್ನು, ಸದ್ಯದಲ್ಲೇ ಲೋಕಸಭಾ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಬಿಜೆಪಿ ಅನಿವಾರ್ಯ. ಇದಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಹಳ ಮುಖ್ಯ. ಹೀಗಾಗಿ ಬಿಎಸ್ವೈ ಹೆಚ್ಚು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತೊಡಗಿಸಿಕೊಳ್ಳಲಿ ಅನ್ನೋ ಉದ್ದೇಶದಿಂದ ಶಾಸಕ ಬಿ.ವೈ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ