newsfirstkannada.com

ವಿಧಾನಪರಿಷತ್ ಚುನಾವಣೆ: ಕೊನೆಗೂ ರಘುಪತಿ ಭಟ್‌ಗೆ ಬಿಜೆಪಿ ಪಕ್ಷದಿಂದ ಬಿಗ್‌ ಶಾಕ್‌!

Share :

Published May 25, 2024 at 8:48pm

    ಜೂನ್ 3ರಂದು ರಾಜ್ಯದಲ್ಲಿ ಮಹತ್ವದ ವಿಧಾನ ಪರಿಷತ್ ಚುನಾವಣೆ

    ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ರಘುಪತಿ ಭಟ್ ಸ್ಪರ್ಧೆ

    ಜೂನ್ 6ರಂದು ಆರು ವಿಧಾನಪರಿಷತ್ ಚುನಾವಣೆಯ ಫಲಿತಾಂಶ

ಬೆಂಗಳೂರು: ಇದೇ ಜೂನ್ 3ರಂದು ರಾಜ್ಯದ ಮೂರು ಶಿಕ್ಷಕರ ಕ್ಷೇತ್ರ, ಮೂರು ಪದವೀಧರರ ವಿಧಾನಪರಿಷತ್‌ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ 6 ಪರಿಷತ್ ಸ್ಥಾನಗಳಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

6 ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರ ಈ ಬಾರಿ ಕುತೂಹಲ ಕೆರಳಿಸಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ರಘುಪತಿ ಭಟ್ ಅವರು ಕಣದಲ್ಲಿದ್ದಾರೆ. ಈ ಬಂಡಾಯದ ಬಿಸಿ ಬಿಜೆಪಿ ನಾಯಕರಿಗೆ ತಟ್ಟಿದ್ದು ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ.

ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಮುಂದಿನ 6 ವರ್ಷಗಳ ಕಾಲ ರಘುಪತಿ ಭಟ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿ ಬಿಜೆಪಿ ಶಿಸ್ತು‌ ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್‌ ಅವರು ಆದೇಶ ನೀಡಿದ್ದಾರೆ.

ಇದನ್ನೂ ಓದಿ: ನನ್ನ ಎಚ್ಚರಿಕೆಗೂ ತಲೆಬಾಗದಿದ್ದರೆ ಅಷ್ಟೇ.. ಮೊಮ್ಮಗನಿಗೆ H.D ದೇವೇಗೌಡರಿಂದ ಬಹಿರಂಗ ಪತ್ರ; ಹೇಳಿದ್ದೇನು? 

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೀರಿ. ಈ ಮೂಲಕ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶಿಸಲಾಗಿದೆ.

ರಾಜ್ಯದ ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ವಿಧಾನಪರಿಷತ್‌ ಕ್ಷೇತ್ರಗಳಿಗೆ ಜೂನ್ 3ರಂದು ಮತದಾನ ನಡೆಯಲಿದೆ. ಜೂನ್ 6ರಂದು ಆರು ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿಧಾನಪರಿಷತ್ ಚುನಾವಣೆ: ಕೊನೆಗೂ ರಘುಪತಿ ಭಟ್‌ಗೆ ಬಿಜೆಪಿ ಪಕ್ಷದಿಂದ ಬಿಗ್‌ ಶಾಕ್‌!

https://newsfirstlive.com/wp-content/uploads/2024/05/Raghupati-Bhatt-Bjp.jpg

Load More