2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಭಾರೀ ತಯಾರಿ!
5 ವರ್ಷಗಳ ಬಳಿಕ ಐಪಿಎಲ್ಗೆ ಕಮ್ಬ್ಯಾಕ್ ಮಾಡಿದ ದ್ರಾವಿಡ್
ಐಪಿಎಲ್‌ನಲ್ಲಿ ಕನ್ನಡಿಗ ರಾಹುಲ್ ದ್ರಾವಿಡ್ಗೆ ಮಹತ್ವದ ಜವಾಬ್ದಾರಿ
ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿದೆ. ಈ ಬೆನ್ನಲ್ಲೇ ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ರಾಜೀನಾಮೆ ನೀಡಿದ್ದರು. ಹಾಗಾಗಿ ಮುಂದಿನ ಐಪಿಎಲ್ ಸೀಸನ್ಗೆ ರಾಹುಲ್ ದ್ರಾವಿಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚ್ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಈಗ ಐಪಿಎಲ್ಗೆ ಕಮ್ಬ್ಯಾಕ್ ಮಾಡಿರೋ ದ್ರಾವಿಡ್ ಆರ್ಸಿಬಿಗೆ ಕೈಕೊಟ್ಟು, ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಜವಾಬ್ದಾರಿ ಹೊತ್ತಿದ್ದಾರೆ.
2025ರ ಐಪಿಎಲ್ ಟೂರ್ನಿಗೆ ಮುನ್ನವೇ ರಾಜಸ್ಥಾನ್ ರಾಯಲ್ಸ್ ಒಪ್ಪಂದಕ್ಕೆ ರಾಹುಲ್ ದ್ರಾವಿಡ್ ಸಹಿ ಹಾಕಿದ್ದಾರೆ. ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದೊಂದಿಗೆ ರಾಹುಲ್ ದ್ರಾವಿಡ್ ಉತ್ತಮ ಸಂಬಂಧ ಹೊಂದಿದ್ದಾರೆ. ಈ ಹಿಂದೆ ತಾವು ಪ್ಲೇಯರ್ ಆಗಿದ್ದಾಗ 2012 ಮತ್ತು 2013ರಲ್ಲಿ ರಾಜಸ್ಥಾನ ತಂಡವನ್ನು ದ್ರಾವಿಡ್ ಮುನ್ನಡೆಸಿದ್ದರು. ಬಳಿಕ 2014 ಮತ್ತು 2015ರ ಐಪಿಎಲ್ ಸೀಸನ್ನಲ್ಲಿ ತಂಡದ ಡೈರೆಕ್ಟರ್ ಮತ್ತು ಮೆಂಟರ್ ಆಗಿ ಕೆಲಸ ಮಾಡಿದ್ದರು.
ಐಪಿಎಲ್ಗೆ ಮತ್ತೆ ಕಮ್ಬ್ಯಾಕ್
ಇನ್ನು, ಇದಾದ ನಂತರ ದ್ರಾವಿಡ್ 2016ರಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡ ಸೇರಿಕೊಂಡರು. ದ್ರಾವಿಡ್ ಅವರನ್ನು ಬಿಸಿಸಿಐ 2019ರಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ಮಖ್ಯಸ್ಥರಾಗಿ ನೇಮಿಸಿತು. 2021ರಲ್ಲಿ ರವಿಶಾಸ್ತ್ರಿ ನಂತರ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ದ್ರಾವಿಡ್ ನೇಮಕಗೊಂಡರು. ಈತ ಮತ್ತೆ ಐಪಿಎಲ್ಗೆ ಕಮ್ಬ್ಯಾಕ್ ಮಾಡಿದ್ದಾರೆ.
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಭಾರೀ ಕುತೂಹಲ ಮೂಡಿಸಿದೆ. ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ಮೆಗಾ ಹರಾಜು ನಡೆಯಲಿದೆ. ಈ ವರ್ಷ ಎಲ್ಲಾ ಐಪಿಎಲ್ ತಂಡಗಳಿಗೂ ಕೇವಲ 4+1 ಆಟಗಾರರನ್ನು ಮಾತ್ರ ರೀಟೈನ್ ಮಾಡಿಕೊಳ್ಳಲು ಅವಕಾಶ ಇದೆ ಎಂದು ವರದಿಯಾಗಿದೆ. ಈ ಹೊತ್ತಲ್ಲೇ ರಾಜಸ್ಥಾನ್ ರಾಯಲ್ಸ್ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ