newsfirstkannada.com

ಸಂಸತ್‌ ಒಳಗೂ ಮೋದಿ ಕಟ್ಟಿ ಹಾಕಲು ಮೆಗಾ ಪ್ಲಾನ್; CWC ಸಭೆಯಲ್ಲಿ ಕಾಂಗ್ರೆಸ್ ಮಹತ್ವದ ನಿರ್ಧಾರ; ಏನದು?

Share :

Published June 8, 2024 at 5:06pm

  ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ನಿರ್ಣಯ

  ರಾಹುಲ್ ಗಾಂಧಿ ಕಾರಣದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ

  ಮೋದಿ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ಸಮರಕ್ಕೆ ಸಜ್ಜು

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ಕಾಂಗ್ರೆಸ್ ಪಕ್ಷ ಇಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ, ಬಿಜೆಪಿಗೆ ಪ್ರಬಲ ಪೈಪೋಟಿ ನೀಡಿದ್ದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಲೋಕಸಭೆಯ ಒಳಗೂ ದಿಟ್ಟವಾದ ಹೋರಾಟ ನಡೆಸಲು ಸಜ್ಜಾಗಿದೆ.

ದೆಹಲಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಆಯ್ಕೆ ಮಾಡಿ ನಿರ್ಣಯ ಕೈಗೊಳ್ಳಲಾಗಿದೆ. CWC ಸಭೆಯಲ್ಲಿ ರಾಹುಲ್ ಗಾಂಧಿ ಅವರೇ ವಿಪಕ್ಷ ನಾಯಕ ಆಗಬೇಕು ಎಂದು ಆಗ್ರಹಿಸಲಾಯಿತು. ಬಹುತೇಕ ಎಲ್ಲಾ ನಾಯಕರು ರಾಹುಲ್ ಗಾಂಧಿ ಅವರೇ ಸ್ಥಾನ ವಹಿಸಿಕೊಳ್ಳುವಂತೆ ಒತ್ತಾಯ ಮಾಡಿದರು.

ಇದನ್ನೂ ಓದಿ: ಉಪ್ಪಿನಕಾಯಿ ಮಾರಾಟದಿಂದ ಸಾಮ್ರಾಜ್ಯ ಕಟ್ಟಿದ ಧೀಮಂತ.. ರಾಮೋಜಿ ರಾವ್ ಬದುಕಿನ ರೋಚಕ ಕಥೆ ಇಲ್ಲಿದೆ 

2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರ ಕಾರಣದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ ಬಂದಿದೆ. ಭಾರತ್ ಜೋಡೋ ಯಾತ್ರೆ ನಡೆದ ಜಾಗದಲ್ಲೆಲ್ಲ ನಾವು ಹೆಚ್ಚು ಸ್ಥಾನ ಗೆದ್ದಿದ್ದೇವೆ. ಮಣಿಪುರದಲ್ಲೂ ಎರಡು ಸ್ಥಾನ ಗೆಲ್ಲಲು ರಾಹುಲ್ ಗಾಂಧಿ ಅವರೇ ಕಾರಣ. ಹೀಗಾಗಿ ರಾಹುಲ್ ಗಾಂಧಿಯೇ ವಿರೋಧ ಪಕ್ಷದ ನಾಯಕ ಆಗಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕರು, CWC ಸದಸ್ಯರು ಆಗ್ರಹಿಸಿದರು.

ಇದನ್ನೂ ಓದಿ: 6 ತಿಂಗಳ ಹಿಂದೆಯೇ ಡಿವೋರ್ಸ್​ಗೆ ನಿರ್ಧಾರ, ರಾಜಿ ಪಂಚಾಯ್ತಿ ಮಾಡಿದ್ರು; ವಕೀಲೆ ಅನಿತಾ ಏನಂದ್ರು ಗೊತ್ತಾ? 

ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಾವು ಬಲಿಷ್ಠ ವಿಪಕ್ಷವಾಗಲು ನಾವು ರೆಡಿ ಇದ್ದೇವೆ. ರಾಹುಲ್ ಗಾಂಧಿಯೇ ವಿಪಕ್ಷ ನಾಯಕನಾಗಲು ಸೂಕ್ತ ಎಂದು CWC ನಿರ್ಧರಿಸಿದೆ. ದೇಶದಲ್ಲಿ ಹಲವು ಸಮಸ್ಯೆಗಳು ಇವೆ. ಇದನ್ನು ಸಮರ್ಥವಾಗಿ ಸಂಸತ್‌ನಲ್ಲಿ ಪ್ರಸ್ತಾಪಿಸಲು ರಾಹುಲ್ ಗಾಂಧಿಯವರೇ ಸೂಕ್ತ. ಇಂದಿನ ಸಭೆಯಲ್ಲಿ ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕ ಆಗುವಂತೆ ಒತ್ತಾಯಿಸಿದ್ದೇವೆ. ರಾಹುಲ್ ಗಾಂಧಿ ಅವರು ಮುಂದಿನ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು CWC ಸಭೆ ಬಳಿಕ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಅವರು ಮಾಹಿತಿ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಂಸತ್‌ ಒಳಗೂ ಮೋದಿ ಕಟ್ಟಿ ಹಾಕಲು ಮೆಗಾ ಪ್ಲಾನ್; CWC ಸಭೆಯಲ್ಲಿ ಕಾಂಗ್ರೆಸ್ ಮಹತ್ವದ ನಿರ್ಧಾರ; ಏನದು?

https://newsfirstlive.com/wp-content/uploads/2024/06/Rahul-Gandhi-Kharge.jpg

Load More