newsfirstkannada.com

‘400 ಮಹಿಳೆಯರ ಅತ್ಯಾಚಾರ.. ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್’- ರಾಹುಲ್‌ ಗಾಂಧಿ ಸ್ಫೋಟಕ ಹೇಳಿಕೆ

Share :

Published May 2, 2024 at 4:11pm

Update May 2, 2024 at 4:13pm

  ‘ಪ್ರಜ್ವಲ್ ರೇವಣ್ಣ 400 ಮಹಿಳೆಯರ ಅತ್ಯಾಚಾರ ಮಾಡಿ ವಿಡಿಯೋ’

  ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚಿಸಿದ್ದಾರೆ

  ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ಕುಮಾರ್ ಪರ ರಾಹುಲ್ ಗಾಂಧಿ ಪ್ರಚಾರ

ಶಿವಮೊಗ್ಗ: ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ. 400 ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಗುಡುಗಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಅಶ್ಲೀಲ ವಿಡಿಯೋ ಮೊದಲು ವಾಟ್ಸ್‌ಆ್ಯಪ್‌ಗೆ ಹಾಕಿದ್ದು ಯಾರು? ಸ್ಫೋಟಕ ಮಾಹಿತಿ ಬಹಿರಂಗ 

ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಪ್ರಕರಣ ಬಿಜೆಪಿಯವರಿಗೆ ಮೊದಲೇ ಗೊತ್ತಿತ್ತು. ಆದರೂ ಪ್ರಧಾನಿ ಮೋದಿ ಹಾಗೂ ಆ ಪಕ್ಷದ ಮುಖಂಡರು ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಮಹಿಳೆಯರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ಅವರು ಪ್ರಜ್ವಲ್ ರೇವಣ್ಣ 400 ಮಹಿಳೆಯರ ಅತ್ಯಾಚಾರ ಮಾಡಿ ವಿಡಿಯೋ ಮಾಡಿದ್ದಾರೆ. ಇದಕ್ಕೆ ಮಾಸ್​ ರೇಪ್​ ಅಂತ ಕರೆಯುತ್ತಾರೆ. ಪ್ರಜ್ವಲ್​ ರೇವಣ್ಣಗೆ ವೋಟ್​ ಹಾಕಿ ಅಂತ ಪ್ರಧಾನಿ ನರೇಂದ್ರ ಮೋದಿ ಕೇಳಿದ್ದಾರೆ ಎಂದು ರಾಹುಲ್ ಗಾಂಧಿ ಗುಡುಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘400 ಮಹಿಳೆಯರ ಅತ್ಯಾಚಾರ.. ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್’- ರಾಹುಲ್‌ ಗಾಂಧಿ ಸ್ಫೋಟಕ ಹೇಳಿಕೆ

https://newsfirstlive.com/wp-content/uploads/2024/05/Rahul-Gandhi-Prajwal-Revanna.jpg

Load More