newsfirstkannada.com

Rahul Gandhi: ಮೋದಿ v/s ರಾಹುಲ್ ಗಾಂಧಿ; ಅಧಿಕೃತ ವಿಪಕ್ಷ ನಾಯಕನ ಆಯ್ಕೆಯಲ್ಲಿ ಹಲವು ವಿಶೇಷ; ಏನದು?

Share :

Published June 25, 2024 at 10:55pm

Update June 25, 2024 at 10:58pm

  ಅಧಿಕೃತ ವಿಪಕ್ಷ ನಾಯಕನ ಪಟ್ಟ ಅಲಂಕರಿಸಿದ ರಾಹುಲ್ ಗಾಂಧಿ

  ಲೋಕಸಭಾ ಚುನಾವಣೆಯಲ್ಲಿ 99 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ!

  ಮೋದಿ, ಬಿಜೆಪಿಗೆ ಇಂಡಿಯಾ ಮೈತ್ರಿಕೂಟದಿಂದ ಮಹತ್ವದ ಸಂದೇಶ

ನವದೆಹಲಿ: ಪಾರ್ಲಿಮೆಂಟ್ ಚುನಾವಣೆ ಬಳಿಕ ಲೋಕಸಭೆಗೆ ನಿಜಕ್ಕೂ ಹೊಸ ಕಳೆ ಬಂದಿದೆ. ಹೊಸ ಸಂಸತ್‌ ಭವನದಲ್ಲಿ ಪ್ರಧಾನಿ ಮೋದಿ ಮೂರನೇ ಬಾರಿಗೆ ಆಡಳಿತ ಆರಂಭಿಸಿದ್ರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯ ಅಧಿಕೃತ ವಿಪಕ್ಷ ನಾಯಕರಾಗಿ ಆಯ್ಕೆ ಆಗಿದ್ದಾರೆ.

ಎಲೆಕ್ಷನ್‌ನಲ್ಲಿ ಇಂಡಿಯಾ ಮೈತ್ರಿಕೂಟ ಅತ್ಯುತ್ತಮ ಸಾಧನೆ ಮಾಡುತ್ತಿದ್ದಂತೆ ಲೋಕಸಭಾ ವಿಪಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿ ಅವರೇ ಆಗಬೇಕೆಂದು ಕಾಂಗ್ರೆಸ್‌ ನಾಯಕರು ಆಗ್ರಹ ಮಾಡಿದ್ದರು. ಆದರೆ ರಾಹುಲ್‌ ಗಾಂಧಿ ಕಡೆಯಿಂದ ಯಾವುದೇ ಅಂತಿಮ ತೀರ್ಮಾನ ಬಂದಿರಲಿಲ್ಲ. ಈಗ ರಾಹುಲ್‌ ಗಾಂಧಿ ಅವರು ವಿಪಕ್ಷ ನಾಯಕನ ಜವಾಬ್ದಾರಿಯುತ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಿನ್ನೆ ಮತ್ತು ಇಂದು ಲೋಕಸಭೆಯ ಮೊದಲ ಸಾಲಿನಲ್ಲಿ ಕುಳಿತಿದ್ದರು. ಈ ಮೊದಲು ಎರಡು, ಮೂರನೇ ಸಾಲುಗಳಲ್ಲಿ ಕುಳಿತುಕೊಳ್ಳುತ್ತಿದ್ದರು.

ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಪೊಲಿಟಿಕಲ್ ಕರಿಯರ್​ಗೆ ಹೊಸ ಟಚ್​.. ರಾಹುಲ್ ಗಾಂಧಿಯಿಂದ ಮಾಸ್ಟರ್​​ ಪ್ಲಾನ್..! 

ಮೋದಿ v/s ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಅಧಿಕೃತ ನಿರ್ಧಾರದಿಂದ ಲೋಕಸಭೆಯಲ್ಲಿ ಈ ಬಾರಿ ಮೋದಿ ವರ್ಸಸ್ ರಾಹುಲ್ ಗಾಂಧಿ ಫೈಟ್‌ ಫಿಕ್ಸ್ ಆಗಿದೆ. ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರು ಸಂಸದರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವಾಗಲು ರಾಹುಲ್ ಗಾಂಧಿ ಅವರು ಸಂವಿಧಾನ ಪ್ರತಿಯನ್ನು ಪ್ರದರ್ಶನ ಮಾಡಿದ್ದರು.

ದೆಹಲಿಯಲ್ಲಿ ಎಲ್ಲಾ ಇಂಡಿಯಾ ಪಕ್ಷದ ನಾಯಕರು ವಿಪಕ್ಷ ನಾಯಕನ ಆಯ್ಕೆ ಕುರಿತು ಸಭೆ ನಡೆಸಿದರು. ನಂತರ ಎಐಸಿಸಿ ನಾಯಕ ಕೆ.ಸಿ‌ ವೇಣುಗೋಪಾಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಹುಲ್ ಗಾಂಧಿ ಅವರು ಲೋಕಸಭೆಯ ವಿಪಕ್ಷ ನಾಯಕರಾಗಲು ಮಿತ್ರಪಕ್ಷದಿಂದ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: VIDEO: ಕಟಕಟ್ ₹8,500 ಕೊಡಿ.. ಕಾಂಗ್ರೆಸ್ ಕಚೇರಿ ಮುಂದೆ ರಾಹುಲ್ ಗಾಂಧಿಗೆ ಮಹಿಳೆಯರ ಪಟ್ಟು! 

ಕಾಂಗ್ರೆಸ್‌ಗೆ ಅಧಿಕೃತ ವಿಪಕ್ಷ ಸ್ಥಾನವಿದ್ದರೂ ವಿಪಕ್ಷ ನಾಯಕನ ಆಯ್ಕೆ ಸಂದರ್ಭದಲ್ಲೂ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಇಂಡಿಯಾ ಮೈತ್ರಿಕೂಟದ ನಾಯಕರ ಅಭಿಪ್ರಾಯ ಸಂಗ್ರಹಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ವಿಪಕ್ಷ ನಾಯಕರು ಒಗ್ಗಟ್ಟಾಗಿದ್ದೆವೆ ಎಂಬ ಸಂದೇಶವನ್ನು ಕಾಂಗ್ರೆಸ್ ಪಕ್ಷ ರವಾನೆ ಮಾಡಿದೆ.

10 ವರ್ಷದ ಬಳಿಕ ಅಧಿಕೃತ ವಿಪಕ್ಷ ನಾಯಕ!
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 99 ಸ್ಥಾನ ಗೆದ್ದಿದ್ದು ಒಂದು ದಾಖಲೆಯಾದ್ರೆ, ರಾಹುಲ್ ಗಾಂಧಿ ಅವರು ವಿರೋಧ ಪಕ್ಷ ನಾಯಕನಾಗಿರೋದು ಮತ್ತೊಂದು ದಾಖಲೆಯಾಗಿದೆ. ಈ ಹಿಂದಿನ 16, 17ನೇ ಲೋಕಸಭೆಯಲ್ಲಿ ಯಾವುದೇ ಪಕ್ಷವೂ ಅಧಿಕೃತ ವಿರೋಧ ಪಕ್ಷವಾಗುವ ಸಂಖ್ಯಾಬಲ ಪಡೆದಿರಲಿಲ್ಲ. ಇದೀಗ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ 99 ಸ್ಥಾನ ಗೆದ್ದಿದ್ದರಿಂದ ಅಧಿಕೃತ ವಿರೋಧ ಪಕ್ಷದ ಸ್ಥಾನಮಾನ‌ ಸಿಕ್ಕಿದೆ.

ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಆಯ್ಕೆ ಆಗುತ್ತಿದ್ದಂತೆ ರಾಹುಲ್ ಗಾಂಧಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಶುಭಾಶಯ ಕೋರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rahul Gandhi: ಮೋದಿ v/s ರಾಹುಲ್ ಗಾಂಧಿ; ಅಧಿಕೃತ ವಿಪಕ್ಷ ನಾಯಕನ ಆಯ್ಕೆಯಲ್ಲಿ ಹಲವು ವಿಶೇಷ; ಏನದು?

https://newsfirstlive.com/wp-content/uploads/2024/06/Rahul-Gandhi-Modi.jpg

Load More